ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

| Published : Aug 26 2025, 02:00 AM IST

ಸಾರಾಂಶ

ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಗಣ್ಯರು ಪರಿಸರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ನಾಪೋಕ್ಲು, ಅರುಣ ಪದವಿ ಪೂರ್ವ ಕಾಲೇಜು ಚೇರಂಬಾಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನ ಅಧ್ಯಕ್ಷರು ಮಾದೆಯಂಡ ಕುಟ್ಟಪ್ಪ, ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಿ.ಎಸ್ ಸುಬ್ಬಯ್ಯ, ಪ್ರಾಂಶುಪಾಲ ಕೆ.ಆರ್ ರಮೇಶ್ ಪರಿಸರದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿದರು. ಈ ಸಂದರ್ಭ ಲಯನ್ಸ್ ಕ್ಲಬ್‌ ಪದಾಧಿಕಾರಿಗಳು, ಸದಸ್ಯರು, ಮುಖ್ಯ ಶಿಕ್ಷಕರು ಲೋಕೇಶ್ ಸಿ ಆರ್. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.