ವಂಡಲ್ ಲಾದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

| Published : Aug 02 2025, 12:00 AM IST

ಸಾರಾಂಶ

ರಾಮನಗರ: ಶಿಕ್ಷಣಕ್ಕೆ ಪೂರಕವಾಗಿ 750 ವಿದ್ಯಾರ್ಥಿಗಳಿಗೆ ವಂಡರ್‌ ಲಾ ಹಾಲಿಡೇಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಪುಸ್ತಕ ಹಾಗೂ ಬ್ಯಾಗ್‌ಗಳನ್ನು ಪ್ರತಿ ವರ್ಷವು ನೀಡುತ್ತಿರುವುದು ಅಭಿನಂದನಾರ್ಹ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್‌ ನಟರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಮನಗರ: ಶಿಕ್ಷಣಕ್ಕೆ ಪೂರಕವಾಗಿ 750 ವಿದ್ಯಾರ್ಥಿಗಳಿಗೆ ವಂಡರ್‌ ಲಾ ಹಾಲಿಡೇಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಪುಸ್ತಕ ಹಾಗೂ ಬ್ಯಾಗ್‌ಗಳನ್ನು ಪ್ರತಿ ವರ್ಷವು ನೀಡುತ್ತಿರುವುದು ಅಭಿನಂದನಾರ್ಹ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್‌ ನಟರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಡದಿ ಹೋಬಳಿ ಗಾಣಕಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಂಡರ್ ಲಾ ಸಂಸ್ಥೆಯ ಸಿಎಸ್‌ಆರ್ ಅನುದಾನದಲ್ಲಿ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

ಗಾಣಕಲ್ ಶಾಲೆ ಸೇರಿ ಸುಮಾರು 750 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡುವ ಮೂಲಕ ವಂಡರ್‌ಲಾ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ವಿದ್ಯಾರ್ಥಿಗಳಿಗೆ ಸರ್ಕಾರ ಸವಲತ್ತುಗಳನ್ನು ನೀಡುತ್ತಿದ್ದರು, ಎಷ್ಟೋ ಮಕ್ಕಳು ಇಂದು ಶಿಕ್ಷಣದಿಂದ ವಂಚಿತ ರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಸ್ಥಳೀಯ ಕಂಪನಿಗಳು ತಮ್ಮ ಸಿಎಸ್‌ಆರ್ ಅನುದಾನದಲ್ಲಿ ಪುಸ್ತಕ ಮತ್ತು ಬ್ಯಾಗ್ ನಂತಹ ನೆರವು ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದ ಜೊತೆಗೆ ಜನರ ಆರೋಗ್ಯ ಕಾಪಾಡಲು ಒತ್ತು ನೀಡಿರುವ ಕಂಪನಿ, ಪ್ರತಿ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ನಿರ್ವಹಣೆ ಮಾಡುತ್ತಿದೆ. ಪ್ರತಿ ಶಾಲೆಯ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಲಕರಣೆಗಳನ್ನು ನೀಡಿದ್ದು, ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯ್ತಿಯ 12 ಗ್ರಾಮಗಳಿಗೆ ಸೋಲಾರ್ ಲೈಟ್‌ಗಳನ್ನು ಕೂಡ ಅಳವಡಿಸಿ ಗ್ರಾಮೀಣಾಭಿವೃದ್ಧಿಯಲ್ಲಿ ತಮ್ಮ ಸೇವೆಯನ್ನು ಮಾಡುತ್ತಿದ್ದಾರೆ. ಇಂತಹ ಕಾರ್ಯ ಮಾಡಿರುವ ವಂಡರ್‌ಲಾ ಮ್ಯಾನೇಜರ್ ರುದ್ರೇಶ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ವಂಡರಲಾ ಸಂಸ್ಥೆಯ ದೇವಯ್ಯ, ಸಜಿತ್, ಮಹೇಶ್, ಹೆಜ್ಜಾಲ ಕೆನರಾಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕ್ ಸೇರಿದಂತೆ ಶಾಲಾ ಮುಖ್ಯ ಶಿಕ್ಷಕರು ಹಾಜರಿದ್ದರು.

----------------------------

1ಕೆಆರ್ ಎಂಎನ್ 3.ಜೆಪಿಜಿ

ಬಿಡದಿ ಹೋಬಳಿ ಗಾಣಕಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಂಡರ್ ಲಾ ಸಂಸ್ಥೆಯ ಸಿಎಸ್‌ಆರ್ ಅನುದಾನದಲ್ಲಿ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ಗಳನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್‌ ನಟರಾಜ್ ವಿತರಿಸಿದರು.

-----------------------------