ರಾಜ್ಯದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಆರು ಚರಣಗಳ ಬದಲಿಗೆ ಕೇವಲ ಎರಡು ಚರಣಗಳನ್ನು ಹಾಡಲು ಸೂಚಿಸಿರುವ ಕರ್ನಾಟಕ ಸರ್ಕಾರದ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ 2026ರ ಜನವರಿಯಲ್ಲಿ ಹೊರಡಿಸಿರುವ ಆದೇಶದಂತೆ ‘ವಂದೇ ಮಾತರಂ’ ಗೀತೆಯ ಅಧಿಕೃತ ಆರು ಚರಣಗಳನ್ನು ಹಾಡಲು ಸೂಚಿಸಲಾಗಿದೆ. ಆದರೆ ರಾಜ್ಯ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಆದೇಶಿಸಿರುವುದು ಕಾಂಗ್ರೆಸ್ ಸರ್ಕಾರದ ನಿಜಬಣ್ಣವನ್ನು ಮತ್ತೊಮ್ಮೆ ಬಯಲು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಆರು ಚರಣಗಳ ಬದಲಿಗೆ ಕೇವಲ ಎರಡು ಚರಣಗಳನ್ನು ಹಾಡಲು ಸೂಚಿಸಿರುವ ಕರ್ನಾಟಕ ಸರ್ಕಾರದ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ 2026ರ ಜನವರಿಯಲ್ಲಿ ಹೊರಡಿಸಿರುವ ಆದೇಶದಂತೆ ‘ವಂದೇ ಮಾತರಂ’ ಗೀತೆಯ ಅಧಿಕೃತ ಆರು ಚರಣಗಳನ್ನು ಹಾಡಲು ಸೂಚಿಸಲಾಗಿದೆ. ಆದರೆ ರಾಜ್ಯ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಆದೇಶಿಸಿರುವುದು ಕಾಂಗ್ರೆಸ್ ಸರ್ಕಾರದ ನಿಜಬಣ್ಣವನ್ನು ಮತ್ತೊಮ್ಮೆ ಬಯಲು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.ಕಾಂಗ್ರೆಸ್‌ಗೆ ದೇಶಕ್ಕಿಂತ ವೋಟ್‌ಬ್ಯಾಂಕ್ ರಾಜಕಾರಣ ಮತ್ತು ತುಷ್ಟೀಕರಣವೇ ಮುಖ್ಯವಾಗಿದೆ ಎಂದು ಟೀಕಿಸಿರುವ ಚೌಟ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಗಳಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಈ ದೇಶ, ಈ ನೆಲ ಮತ್ತು ದೇಶದ ಜನರಿಗಿಂತ ಕಾಂಗ್ರೆಸ್ ಹೈಕಮಾಂಡ್‌ನ ಆದೇಶವೇ ಮುಖ್ಯ ಎಂಬುದು ಈ ಬೆಳವಣಿಗೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್‌ಗೆ ಭಾರತ ಮಾತೆ ಅಥವಾ ‘ವಂದೇ ಮಾತರಂ’ ವಿಚಾರದಲ್ಲಿ ಸಮಸ್ಯೆಯಿದ್ದರೆ ಅದನ್ನು ಬಹಿರಂಗವಾಗಿ ಹೇಳಬೇಕು. ಸರ್ಕಾರಿ ಆದೇಶದ ಹಿಂದೆ ಅಡಗಿಕೊಳ್ಳುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಯಾವುದೇ ಕಾಂಗ್ರೆಸ್ ಸರ್ಕಾರವೂ ಭಾರತದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ದೇಶದ ಪ್ರತಿಯೊಂದು ಬೀದಿ ಹಾಗೂ ಮೂಲೆಯಲ್ಲೂ ‘ವಂದೇ ಮಾತರಂ’ ಗೀತೆಯ ಎಲ್ಲ ಆರು ಚರಣಗಳ ಜಯಘೋಷ ಮೊಳಗಲಿದೆ. ಈ ವಿಚಾರವನ್ನು ತಡೆಯಲು ನಡೆಸುವ ಯಾವುದೇ ಪ್ರಯತ್ನವೂ ತುಷ್ಟೀಕರಣ ರಾಜಕಾರಣದ ವಿರುದ್ಧದ ಜನರ ಧ್ವನಿಯಾಗಿ ಹೊರಹೊಮ್ಮಲಿದೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.