ಸಾರಾಂಶ
ಕನ್ನಡಪ್ರಭ ವಾರ್ತೆ ಆಲೂರು
ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವನಿತಾ ಮಂಜುನಾಥ್, ಉಪಾಧ್ಯಕ್ಷರಾಗಿ ಪುಷ್ಪವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ತಾಲೂಕು ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ವನಿತಾ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಪುಷ್ಪಾವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆ ಆಗಿರುವುದಾಗಿ ಘೋಷಣೆ ಮಾಡಿದರು.
ಮಡಬಲು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ವನಿತಾ ಮಂಜುನಾಥ್ ಮಾತನಾಡಿ, ಮಡಬಲು ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ನನ್ನನ್ನು ಎಲ್ಲಾರು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ್ದಾರೆ. ಈ ಸಂದರ್ಭದಲ್ಲಿ ನನ್ನನ್ನು ಗ್ರಾಮ ಪಂಚಾಯಿತಿ ಸದಸ್ಯೆಯನ್ನಾಗಿ ಆಯ್ಕೆ ಮಾಡಿದ ಎಲ್ಲಾ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇಂದು ನನ್ನನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಮುಖಂಡರಿಗೂ ಹಾಗೂ ಹಿರಿಯರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿ, ಪಂಚಾಯಿತಿ ಈ ಹಿಂದೆ ಇದ್ದ ಅಧ್ಯಕ್ಷರಿಗೆ ಹೇಗೆ ಸಹಕಾರ ನೀಡಿದಂತೆ ನನಗೂ ಕೂಡ ನಿಮ್ಮೆಲ್ಲರ ಸಹಕಾರ ನೀಡಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಿ, ಪಂಚಾಯಿತಿ ವ್ಯಾಪ್ತಿಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಲ್ಲಿ ಕಾರ್ಯನಿರ್ವಹಿಸುತ್ತೇನೆ. ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷ ಭೇದ ಮಾಡದೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.ನೂತನ ಉಪಾಧ್ಯಕ್ಷೆ ಪುಷ್ಪಾವತಿ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು, ಎಲ್ಲ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ನೀರು, ಬೀದಿದೀಪ, ಚರಂಡಿಗಳಿಗೆ ಮೊದಲ ಆದ್ಯತೆ ನೀಡಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಎಚ್.ಎಸ್ ಗಿರೀಶ್, ಬಿ.ಎಸ್.ದೇವರಾಜು, ಗಂಗಾಧರ, ರಾಜೇಶ್ವರಿ ಹಾಗೂ ಮಾಜಿ ಉಪಾಧ್ಯಕ್ಷರುಗಳಾದ ಲೀಲಾವತಿ, ಡೈಲಾಮಣಿ, ಪ್ರದೀಪ ಕೆ ಎಸ್ ಮತ್ತು ಬಿಜೆಪಿ ತಾಲೂಕು ಅಧ್ಯಕ್ಷೆ ಉಮಾ, ರವಿ ಪ್ರಕಾಶ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಪೃಥ್ವಿ ಜಯರಾಮ್, ಕದಾಳು ಲೋಕೇಶ್, ಕಾಂಗ್ರೆಸ್ ಮುಖಂಡ ಕೆರೆಹಳ್ಳಿ ಶಾಂತಪ್ಪ, ರಘು ಪಾಳ್ಯ, ಇತರರಿದ್ದರು.