ಗೊರವನಹಳ್ಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ

| Published : Aug 17 2024, 12:51 AM IST

ಸಾರಾಂಶ

ಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಭಕ್ತರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ಕೊರಟಗೆರೆಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಭಕ್ತರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪಂಚಾಮೃತ ಅಭಿಷೇಕ, ನಂತರ ಗಣ ಹೋಮ ಸೇರಿದಂತೆ ವಿಶೇಷ ಪೂಜೆ ಹಾಗೂ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ, ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ, ತಗ್ಗೀಹಳ್ಳಿ ಶ್ರೀಮಠದ ಸ್ವಾಮೀ ರಮಾನಂದಜೀ ಸೇರಿದಂತೆ ಇತರೆ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಶ್ರೀಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು. ಬಂದಂತಹ ಭಕ್ತರಿಗೆ ನೂತನ ದಾಸೋಹ ಕಟ್ಟಡದಲ್ಲಿ ದಾಸೋಹದ ವ್ಯವಸ್ಥೆ ಕೂಡ ಮಾಡಲಾಗಿದ್ದು, ಫ್ರೆಂಡ್ಸ್ ಗ್ರೂಪ್‌ನವರು ದಾಸೋಹ ಕಾರ್ಯದಲ್ಲಿ ಕೈ ಜೋಡಿಸಿದರು. ಪೋಲಿಸ್ ಇಲಾಖೆ ಅಧಿಕಾರಿಗಳು ಸೂಕ್ತ ಭದ್ರತೆ ನೀಡಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.