ವರಮಹಾಲಕ್ಷ್ಮೀ ಹಬ್ಬ: ದೇವಾಲಯಗಳಲ್ಲಿ ವಿಶೇಷ ಪೂಜೆ

| Published : Aug 17 2024, 12:57 AM IST

ಸಾರಾಂಶ

ಗುಬ್ಬಿ: ತಾಲೂಕಿನಾದ್ಯಂತ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ಧ-ಭಕ್ತಿಯಿಂದ ಅದ್ಧೂರಿಯಾಗಿ ಆಚರಿಸಲಾಯಿತು.

ಗುಬ್ಬಿ: ತಾಲೂಕಿನಾದ್ಯಂತ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ಧ-ಭಕ್ತಿಯಿಂದ ಅದ್ಧೂರಿಯಾಗಿ ಆಚರಿಸಲಾಯಿತು.

ಮನೆಗಳಲ್ಲಿ ಲಕ್ಷ್ಮೀ ಮೂರ್ತಿಯನ್ನು ಕೂರಿಸಿ ಶಕ್ತಾನುಸಾರ ಪೂಜಾ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು. ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ವಿಶೇಷವಾಗಿ ವಿಷ್ಣು ಮತ್ತು ಮಹಾಲಕ್ಷ್ಮೀ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದ ಹೋಮ, ಹವನ, ಅಭಿಷೇಕಗಳ ನಂತರ ಅಮ್ಮನವರ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.

ಪಟ್ಟಣದ ಮಹಾಲಕ್ಷ್ಮೀ ದೇವಾಲಯದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ, ಅರ್ಚನೆ ಹಾಗೂ ಅಭಿಷೇಕಗಳನ್ನು ಮಾಡಲಾಯಿತು. ಬಳಿಕ ಅಮ್ಮನವರ ಮೂರ್ತಿಯನ್ನು ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು.

ಪಟ್ಟಣದ ಭಕ್ತರು ವಿಶೇಷವಾಗಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಾಲಯಗಳಿಗೆ ಭೇಟಿ ನೀಡಿದ ಭಕ್ತಾದಿಗಳಿಗೆ ತೀರ್ಥ, ಪ್ರಸಾದ ವಿತರಿಸಲಾಯಿತು. 16 ಜಿ ಯು ಬಿ 4ಗುಬ್ಬಿ ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ನೆಲೆಸಿರುವ ಶ್ರೀ ಮಹಾಲಕ್ಷ್ಮಿ ಅಮ್ಮನವರಿಗೆ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.