ಪಂಪಾಸರೋವರದ ವಿಜಯಲಕ್ಷ್ಮೀ ದೇವಸ್ಥಾದಲ್ಲಿ ವರಮಹಾಲಕ್ಷ್ಮೀ ಪೂಜೆ

| Published : Aug 17 2024, 12:49 AM IST

ಪಂಪಾಸರೋವರದ ವಿಜಯಲಕ್ಷ್ಮೀ ದೇವಸ್ಥಾದಲ್ಲಿ ವರಮಹಾಲಕ್ಷ್ಮೀ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಪ್ರಸಿದ್ಧ ಪಂಪಾಸರೋವರದ ವಿಜಯ ಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ತಾಲೂಕ ಆಡಳಿತದಿಂದ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಗಂಗಾವತಿ

ತಾಲೂಕಿನ ಪ್ರಸಿದ್ಧ ಪಂಪಾಸರೋವರದ ವಿಜಯ ಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ತಾಲೂಕ ಆಡಳಿತದಿಂದ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.

ಹಬ್ಬದ ಪ್ರಯುಕ್ತ ಸರ್ಕಾರದ ಆದೇಶದಂತೆ ಪಂಪಾಸರೋವರದ ದೇವಸ್ಥಾನದಲ್ಲಿ ಮುತ್ತೈದೆಯರಿಗೆ ಅರಿಶಿನ ಕುಂಕುಮ, ಬಳೆಗಳನ್ನು ನೀಡಲಾಯಿತು. ಈ ಸಂದರ್ಭ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತರು ಆಗಮಿಸಿ ದರ್ಶನ ಪಡೆದರು.

ಗಂಗಾವತಿ ನಗರ ಸೇರಿದಂತೆ ತಾಲೂಕಿನಲ್ಲಿ ಮಹಿಳೆಯರು ಮನೆ ಮನೆಗಳಲ್ಲಿ ದೇಗುಲಗಳಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ನೆರವೇರಿಸಿದರು.

ಕುಷ್ಟಗಿಯಲ್ಲಿ ಸಡಗರದ ವರಮಹಾಲಕ್ಷ್ಮೀ ಪೂಜೆ:

ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ಹಾಗೂ ವಿವಿಧ ಗ್ರಾಮಗಳಲ್ಲಿ ಮಹಿಳೆಯರು ವರಲಕ್ಷ್ಮಿ ಹಬ್ಬವನ್ನು ಸಡಗರದಿಂದ ಆಚರಿಸಿದರು.ಶ್ರಾವಣ ಮಾಸದ ಎರಡನೇ ಶುಕ್ರವಾರವು ವರಮಹಾಲಕ್ಷ್ಮಿ ಪೂಜೆಯ ದಿನವಾಗಿದೆ. ಈ ಹಬ್ಬದಾಚರಣೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚು ಶ್ರೇಷ್ಠತೆ ಪಡೆದುಕೊಳ್ಳುತ್ತಿದ್ದು, ಪ್ರತಿಯೊಬ್ಬರು ಆಚರಿಸಲು ಮುಂದಾಗುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಪೂಜಿಸಲು ಮುಂದಾಗಿದ್ದಾರೆ. ಈ ವರ್ಷ ಏಕಾದಶಿ ಇರುವ ಹಿನ್ನೆಲೆಯಲ್ಲಿ ಕೆಲವರು ಈ ಹಬ್ಬವನ್ನು ಶನಿವಾರ ಆಚರಣೆ ಮಾಡುತ್ತಿದ್ದಾರೆ.ವರಮಹಾಲಕ್ಷ್ಮಿ ದೇವಿಯ ಪೂಜೆಗೆ ಮಹಿಳೆಯರು ಹೊಸ ಬಟ್ಟೆ ಧರಿಸಿ ಸಿಹಿ ತಿಂಡಿಗಳು ಹಾಗೂ ಹಣ್ಣು ಹಂಪಲುಗಳನ್ನು ಸಿದ್ದಪಡಿಸಿ ಪೂಜೆ ಮಾಡಿದರು. ನಂತರ ಒಬ್ಬರಿಗೊಬ್ಬರು ಮನೆಮನೆಗೆ ತೆರಳಿ ಪೂಜೆಯಲ್ಲಿ ಭಾಗವಹಿಸಿದರು. ದೇವರಿಗೆ ನೈವೇದ್ಯ ಸಲ್ಲಿಸುವುದರ ಜತೆಗೆ ಮಹಿಳೆಯರನ್ನು ಮನೆಗಳಿಗೆ ಕರೆಸಿಕೊಂಡು ಉಡಿ ತುಂಬಿ ಹರಸಿದರು.