ಅರಸೀಕೆರೆ, ಹೊನ್ನಾಲದಮ್ಮ ದೇವಿ, ವರ್ಧಂತಿ ಮಹೋತ್ಸವ, ಪ್ರತಿ ಆಷಾಢ ಮಾಸದಲ್ಲಿ ನಡೆಯುವ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ನಾಡಿನ ಅಪಾರ ಸಂಖ್ಯೆಯ ಭಕ್ತರನ್ನು ಸೆಳೆಯುವುದು ವಾಡಿಕೆ. ಜಾಜೂರು ಗ್ರಾಮದ ಗ್ರಾಮ ದೇವತೆ ಹೊನ್ನಾಲದಮ್ಮ ದೇವಿ, ಅಮ್ಮಯ್ಯಜ್ಜಿ ದೇವಿ, ವೀರಭದ್ರೇಶ್ವರ ಸ್ವಾಮಿ, ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿ ಹಾಗೂ ರಂಗನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿತು. ವರ್ಧಂತಿ ಮಹೋತ್ಸವಕ್ಕೆ ದೂರದ ಊರುಗಳಿಂದ ಭಕ್ತರು ಆಗಮಿಸಿ ದೇವಿಯರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾದರು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅರಸೀಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿರುವ ಐತಿಹಾಸಿಕ ಹೊನ್ನಾಲದಮ್ಮ ದೇವಿ ದೇವಾಲಯದಲ್ಲಿ ವಾರ್ಷಿಕ ವರ್ಧಂತಿ ಮಹೋತ್ಸವವು ಮಂಗಳವಾರ ಭಕ್ತಿಭಾವದಿಂದ ಹಾಗೂ ಸಡಗರ-ಸಂಭ್ರಮದಿಂದ ನೆರವೇರಿತು. ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಿಗೆ ವಿಶೇಷ ಅಭಿಷೇಕ, ಮಹಾಪೂಜೆ, ಅಲಂಕಾರ, ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.

ಪ್ರತಿ ಆಷಾಢ ಮಾಸದಲ್ಲಿ ನಡೆಯುವ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ನಾಡಿನ ಅಪಾರ ಸಂಖ್ಯೆಯ ಭಕ್ತರನ್ನು ಸೆಳೆಯುವುದು ವಾಡಿಕೆ. ಜಾಜೂರು ಗ್ರಾಮದ ಗ್ರಾಮ ದೇವತೆ ಹೊನ್ನಾಲದಮ್ಮ ದೇವಿ, ಅಮ್ಮಯ್ಯಜ್ಜಿ ದೇವಿ, ವೀರಭದ್ರೇಶ್ವರ ಸ್ವಾಮಿ, ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿ ಹಾಗೂ ರಂಗನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿತು. ವರ್ಧಂತಿ ಮಹೋತ್ಸವಕ್ಕೆ ದೂರದ ಊರುಗಳಿಂದ ಭಕ್ತರು ಆಗಮಿಸಿ ದೇವಿಯರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾದರು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.