ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ

| Published : Feb 07 2024, 01:50 AM IST

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ಮಹರ್ಷಿ ವಾಲ್ಮೀಕಿ ಭವನದ ಸುಮಾರು 75 ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ಹಾಗೂ ಇತರೆ ಕಾಮಗಾರಿಗಳಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬುದ್ದ, ಬಸವ, ಕನಕ, ಅಂಬೇಡ್ಕರ್, ವಾಲ್ಮೀಕಿ ಒಂದು ಧರ್ಮಕ್ಕೆ ಸೇರಿದ ಮಹಾ ಪುರುಷರಲ್ಲ. ಇವರೆಲ್ಲರೂ ಶೋಷಿತರು ಹಾಗೂ ತುಳಿತಕ್ಕೊಳಗಾದವರ ಸಮಾನತೆ ತರಬೇಕೆಂಬ ವಿಚಾರಧಾರೆಗಳು ಒಂದೇ ಆಗಿರುವುದರಿಂದ ಇಂದಿಗೂ ಜಯಂತಿ ಆಚರಣೆ ಮೂಲಕ ಜೀವಂತ ವಾಗಿರುವರೆಂದು ಹೇಳಿದರು. ಕಳೆದ ತಿಂಗಳಲ್ಲಿ ಕ್ಷೇತ್ರದಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ 15 ಕೋಟಿ ರು. ಮಂಜೂರಾಗಿದೆ. ಜಿಲ್ಲಾ ಪಂಚಾಯಿತಿಯಿಂದ 79 ಲಕ್ಷ ರು. ವಿವಿಧ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಿ, ಕಾಮಗಾರಿ ಆರಂಭವಾಗಿದೆ. ತಾಪಂ ಅನುದಾನದಲ್ಲಿ 123 ಲಕ್ಷ ರು. ಕಾಮಗಾರಿ ಆರಂಭವಾಗಿದೆ. ಎಸ್‌ಇಪಿಟಿಎಸ್‌ ಯೋಜನೆಯಡಿ 75 ಲಕ್ಷ ರು. ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ ರು. ಅನುದಾನ ಬಿಡುಗಡೆಯಾಗಿ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. 90 ಲಕ್ಷ ರು. ವೆಚ್ಚದಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಸದಸ್ಯ ಗುರುಮಲ್ಲಪ್ಪ, ಜಿಲ್ಲಾ ವಾಲ್ಮಿಕಿ ಯುವಕ ಸಂಘದ ಅಧ್ಯಕ್ಷ ಜಗಧೀಶ್‌ ಕೋಟೆ, ಜಿಲ್ಲಾ ಬಿ.ಎಸ್.ಪಿ ಅಧ್ಯಕ್ಷ ರಾಧಾಕೃಷ್ಣ, ಹಿರೇಮಗಳೂರು ರಾಮಚಂದ್ರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ಶ್ರೀನಿವಾಸ್, ಗುಣವತಿ, ಐಟಿಡಿಪಿ ಅಧಿಕಾರಿ ಭಾಗಿರಥೀ ಉಪಸ್ಥಿತರಿದ್ದರು.--- ಬಾಕ್ಸ್‌ ---ಕಾಮಗಾರಿ ಬಿಲ್‌ಗೆ ಕಮಿಷನ್‌: ಸಿ.ಟಿ. ರವಿಗೆ ಟಾಂಗ್‌ ಕೊಟ್ಟ ಶಾಸಕ ತಮ್ಮಯ್ಯಚಿಕ್ಕಮಗಳೂರು: ಮೆಡಿಕಲ್‌ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ 455 ಕೋಟಿ ರು.ಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದರಿಂದ ಮಾಜಿ ಶಾಸಕರು ಸ್ಥಳ ಪರಿಶೀಲನೆ ಮಾಡಿ, ಪ್ರಚಾರ ಗಿಟ್ಟಿಸಿಕೊಂಡಿದ್ದಾ ರೆಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2004 ರ ಹಿಂದೆ ಬಿಜೆಪಿ ನಾಯಕರ ಪರಿಸ್ಥಿತಿ ಹೇಗಿತ್ತು ಎಂಬ ಬಗ್ಗೆ ನಾನು ವಿಷಯ ಪ್ರಸ್ತಾಪಿಸುವುದಿಲ್ಲ, ಕಾಮಗಾರಿಗಳಲ್ಲಿ ಕಮಿಷನ್ ಹೊಡೆಯುವ ಅಗತ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ಈ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಮಾಜಿ ಶಾಸಕರು ಬಿಡಬೇಕು, ಮೆಡಿಕಲ್‌ ಕಾಲೇಜು ಹಾಗೂ ಸೂಪರ್‌ ಸ್ಪೆಷಲಿಟಿ ಆಸ್ಪತ್ರೆ ಕಟ್ಟಡಗಳ ನಿರ್ಮಾಣದ ಗುತ್ತಿಗೆ ಯಾರು ಪಡೆದಿದ್ದಾರೆ ಅದರ ಹಿಂದೆ ಯಾರು ಇದ್ದಾರೆ ಎಂಬುದು ನನಗೆ ಗೊತ್ತಿದೆ ಎಂದರು.ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವೈದ್ಯಕೀಯ ಕಾಲೇಜು ಕಟ್ಟಡದ ಕಾಮಗಾರಿಯ 10 ಕೋಟಿ ರು. ಬಿಲ್‌ ಪಾವತಿಸಲಾಗಿದೆ ಎಂದರು. 6 ಕೆಸಿಕೆಎಂ 6ಚಿಕ್ಕಮಗಳೂರಿನ ಮಹರ್ಷಿ ವಾಲ್ಮೀಕಿ ಭವನಕ್ಕೆ ಕಾಂಪೌಂಡ್ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.