ಸಾರಾಂಶ
- ಮೊದಲ ದಿನ ಆವರಗೆರೆ ಗ್ರಾಮದ ಗೋ ಶಾಲೆಯಲ್ಲಿ ರಾಸುಗಳಿಗೆ ಮೇವು ವಿಚರಣೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ, ನಗರ ಜಿಲ್ಲೆ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ 57ನೇ ಜನ್ಮದಿನದ ಅಂಗವಾಗಿ ಇಂದಿನಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಎಸ್. ಮಲ್ಲಿಕಾರ್ಜುನರ ಜನ್ಮದಿನದ ಅಂಗವಾಗಿ ಮೊದಲ ದಿನ ಆವರಗೆರೆ ಗ್ರಾಮದ ಗೋಶಾಲೆಯಲ್ಲಿ ರಾಸುಗಳಿಗೆ ಮೇವು ವಿತರಣೆ ಮಾಡಿ, ಜನ್ಮದಿನದ ಹಿನ್ನೆಲೆ ಸಾಮಾಜಿಕ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದೇವೆ ಎಂದರು.
ಆಶಾಕಿರಣ ಟ್ರಸ್ಟ್‌ನ ಮಕ್ಕಳಿಗೆ ಸಿಹಿ ವಿತರಣೆ, ವನಿತಾ ಸಮಾಜದ ಹಿರಿಯ ನಾಗರೀಕರಿಗೆ ಸೀರೆ ವಿತರಣೆ, ಸಿಹಿಯೂಟ ಮತ್ತು ಅನ್ನ ಸಂತರ್ಪಣೆ, ವೀರೇಶ್ವರ ಪುಣ್ಯಾಶ್ರಮದ ಮಕ್ಕಳಿಗೆ ಬಟ್ಟೆ ವಿತರಣೆ, ಅಂಧ ಹೆಣ್ಣುಮಕ್ಕಳ ಶಾಲೆಯಲ್ಲಿ ಸಿಹಿಯೂಟ ವಿತರಣೆ, ರಕ್ತದಾನ ಶಿಬಿರ ಹೀಗೆ ಹಲವಾರು ಸಾಮಾಜಿಕ ಸೇವಾ ಕಾರ್ಯವನ್ನು ಕಾಂಗ್ರೆಸ್ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಅಭಿಮಾನಿಗಳಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.ಪಕ್ಷದ ಮುಖಂಡರಾದ ಪಾಲಿಕೆ ಸದಸ್ಯ ಜಿ.ಎಸ್. ಮಂಜುನಾಥ ಗಡಿಗುಡಾಳ, ಎ.ನಾಗರಾಜ, ಕೆ.ಜಿ. ಶಿವಕುಮಾರ, ಮಂಗಳಮ್ಮ, ಮಂಜುಳಮ್ಮ, ದಾಕ್ಷಾಯಣಮ್ಮ, ರಾಘವೇಂದ್ರ ಗೌಡ, ರಾಜು ಭಂಜಾರಿ, ಶುಭಮಂಗಳ, ರಾಜೇಶ್ವರಿ, ರಾಮಯ್ಯ, ಮುರುಗೇಶ, ಡೋಲಿ ಚಂದ್ರು, ಚಂದ್ರಪ್ಪ, ಯುವರಾಜ ಇತರರು ಇದ್ದರು.
- - -ಟಾಪ್ ಕೋಟ್ ಮೂರು ಸಲ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ನಗರ ಮತ್ತು ಜಿಲ್ಲೆಯನ್ನು ಭಾರತದ ಭೂಪಟದಲ್ಲಿ ಗುರುತಿಸುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮಲ್ಲಿಕಾರ್ಜುನರ ಸೇವೆ ಇನ್ನಷ್ಟು ನಗರ, ಜಿಲ್ಲೆಗೆ ಸಿಗಲಿ ಎಂಬುದಾಗಿ ಪ್ರಾರ್ಥಿಸಿ, ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಆಯಾ ಭಾಗದ ಬೂತ್ ಮಟ್ಟದ ಕಾರ್ಯಕರ್ತರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಲಿದ್ದಾರೆ
- ದಿನೇಶ ಕೆ. ಶೆಟ್ಟಿ, ಅಧ್ಯಕ್ಷ, ದೂಡಾ- - - -16ಕೆಡಿವಿಜಿ3: