ಸಾರಾಂಶ
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಉಪ್ಪಿನಂಗಡಿ ಇದರ ವರ್ಶೋದ ಉಚ್ಚಯ ಬೊಕ್ಕ ಆಟಿದ ಮದಿಪು ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಒಡಿಯೂರು ಮಠಾಧೀಶ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಸಂಸ್ಕಾರಯುತ ಜೀವನದಿಂದ ಹಿಂಸಾರಹಿತ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಮಠಾಧೀಶ ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದರು. ಅವರು ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಉಪ್ಪಿನಂಗಡಿ ಇದರ ವರ್ಶೋದ ಉಚ್ಚಯ ಬೊಕ್ಕ ಆಟಿದ ಮದಿಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡುತ್ತಿದ್ದರು. ಮನೆಯೇ ಮೊದಲ ಪಾಠ ಶಾಲೆ ತಾಯಿಯೇ ಮೊದಲ ಗುರು ಎಂಬ ಮಾತು ಇಂದಿನ ದಿನಗಳಲ್ಲಿ ಅರ್ಥ ಕಳೆದುಕೊಳ್ಳುತ್ತಿರುವುದು ಕಳವಳಕಾರಿಯಾಗಿದೆ. ಮಕ್ಕಳಿಗೆ ತಾಯಿ ಅಡುಗೆ ಮಾಡಿ ಬಡಿಸುವ ಬದಲು ಬಾಗಿಲಿಗೆ ಆಹಾರ ಪದಾರ್ಥವನ್ನು ಸರಬರಾಜು ಮಾಡುವ ಸಂಸ್ಥೆಯನ್ನು ಅವಲಂಬಿಸುತ್ತಿದ್ದಾರೆ. ಇದರಿಂದಾಗಿ ತಾಯಿಯ ಮಹತ್ವ ಪಲ್ಲಟವಾಗುತ್ತಿದೆ. ಋತುಗಳಾಧಾರಿತ ಆಹಾರ ಪದ್ಧತಿಯನ್ನು ಅನುಸರಿಸುತ್ತಿದ್ದ ನಮ್ಮ ಹಿರಿಯರು ತನ್ಮೂಲಕ ಆರೋಗ್ಯವನ್ನು ಕಾಪಾಡಿಕೊಂಡಿದ್ದರು. ಆದರೆ ಇಂದು ನಾಲಗೆ ರುಚಿಯ ಆಹಾರದತ್ತ ಗಮನ ಹರಿಸಿ ಅನಾರೋಗ್ಯವನ್ನು ಹಣ ಕೊಟ್ಟು ಖರೀದಿಸುವ ಸ್ಥಿತಿ ಬಂದಿರುವುದು ದುಃಖಕರ. ಈ ಕಾರಣಕ್ಕೆ ಮಾತೆಯರು ತಮ್ಮ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿ ಉತ್ತಮ ಮನೆಯನ್ನು ನಿರ್ಮಿಸಲು ಮುಂದಾಗಬೇಕು ಎಂದು ಕರೆ ನೀಡಿದರು. ಸಬಾಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ ರಾಧಾಕೃಷ್ಣ ನಾಯಕ್ ಮಾತನಾಡಿ, ಎಲ್ಲರ ಹಿತ ಬಯಸುವ ನಿಟ್ಟಿನಲ್ಲಿ ಕೈಗೊಂಡ ಪೂಜಾ ಕೈಂಕರ್ಯಗಳು ಭಗವಂತನ ಪ್ರೀತಿಗೆ ಪಾತ್ರವಾಗುವುದು ಎಂದರು. ಕಾರ್ಯಕ್ರಮದಲ್ಲಿ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಅಧ್ಯಕ್ಷ ಕರುಣಾಕರ ಸುವರ್ಣ , ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜಸೇವಾ ನೆಲೆಯಲ್ಲಿ ಹೊನ್ನಪ್ಪ ಗೌಡ ವರೆಕ್ಕಾ ಹಾಗೂ ಆರೋಗ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಗೈದ ಗಾಯತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಲ್ಲಿಕಾ ಜಯರಾಮ ಶೆಟ್ಟಿ , ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಸುರೇಶ್ ಅತ್ರಮಜಲು, ರಾಮಚಂದ್ರ ಮಣಿಯಾಣಿ, ಎನ್ ಉಮೇಶ್ ಶೆಣೈ , ರಮೇಶ್ ಎನ್ , ಜಯಂತ ಪೊರೋಳಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಹರಿರಾಮಚಂದ್ರ, ಕೈಲಾರ್ ರಾಜಗೋಪಾಲ ಭಟ್ , ವಿದ್ಯಾಧರ ಜೈನ್, ಶಶಿಧರ್ ರೈ, ವಿಶ್ವನಾಥ ರೈ, ಶಾಂತಾ ವಿ ಶೆಟ್ಟಿ, ವಿನಯಾ ಆರ್ ರೈ, ಶರತ್ ಕೋಟೆ, ಚಂದ್ರಶೇಖರ್ ಮಡಿವಾಳ, ಕೃಷ್ಣಪ್ರಸಾದ್ ದೇವಾಡಿಗ, ಮಾಧವಿ ರೈ, ಸುಜಾತ ರೈ , ಆನಂದ ರೈ , ಭವನೇಶ್ವರಿ ರೈ, ದೇವರಾಜ್ ಮತ್ತಿತರರು ಭಾಗವಹಿಸಿದ್ದರು.ಸಮಿತಿಯ ಪದಾಧಿಕಾರಿಗಳಾದ ಜಯಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಸುಧಾಕರ ಶೆಟ್ಟಿ ವಂದಿಸಿದರು. ಕಿಶೋರ್ ಕುಮಾರ್ ಜೋಗಿ ಮತ್ತು ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು.