ಸಾರಾಂಶ
ತಾಲೂಕಿನ ಬೆಂಡೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚಿಕ್ಕೂರು ಗ್ರಾಮದ ವಸಂತ ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಸೈದಹಳ್ಳಿ ಮೂರ್ತಿ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ವಸಂತ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರು ಹಾಗೂ ಸದಸ್ಯರ ಒಡಗೂಡಿ ಬೆಂಡೆಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಬೆಂಡೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚಿಕ್ಕೂರು ಗ್ರಾಮದ ವಸಂತ ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಸೈದಹಳ್ಳಿ ಮೂರ್ತಿ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿಕಟಪೂರ್ವ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿದ್ದ ಚಂದ್ರಮ್ಮ ಅಜ್ಜಪ್ಪ ಮತ್ತು ಚಂದ್ರೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಗ್ರಾಮ ಪಂಚಾಯಿತಿ ಆವರಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ವಸಂತ ಹಾಗೂ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ವಸಂತ ಮತ್ತು ಉಪಾಧ್ಯಕ್ಷ ಮೂರ್ತಿ ಭೋವಿ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿಗಳು ಆದ ತಾಲೂಕು ಪಂಚಾಯಿತಿ ಕಾರ್ಯವನ್ನು ನಿರ್ವಹಣಾಧಿಕಾರಿ ಸತೀಶ್ ವಸಂತ ಹಾಗೂ ಮೂರ್ತಿ ಭೋವಿಯವರು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನ ಅಭಿನಂದಿಸಿದ ಶಾಸಕ ಕೆಎಂ ಶಿವಲಿಂಗೇಗೌಡ ಮಾತನಾಡಿ, ತಮಗೆ ಒಲಿದು ಬಂದಿರುವ ಜವಾಬ್ದಾರಿಯನ್ನ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಮರ್ಥಕವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಯ ಇತರ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಡೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸುವಂತೆ ಕಿವಿಮಾತು ಹೇಳಿದರಲ್ಲದೆ ಕ್ಷೇತ್ರದ ಶಾಸಕನಾಗಿ ನಾನು ನಿಮಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ವಸಂತ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರು ಹಾಗೂ ಸದಸ್ಯರ ಒಡಗೂಡಿ ಬೆಂಡೆಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಚಂದ್ರಮ್ಮ ಅಜ್ಜಪ್ಪ ಹಾಗೂ ಮಾಜಿ ಉಪಾಧ್ಯಕ್ಷರಾದ ಚಂದ್ರೇಗೌಡರು ಮತ್ತು ಸದಸ್ಯರುಗಳಾದ ಕುಬೇರಪ್ಪ, ಗಂಗಾಧರ್, ನಟರಾಜ್,ಸಿದ್ದಾನಾಯ್ಕ್, ಲಲಿತಮ್ಮ,ಜಗದೀಶ್.ಶಾರದಮ್ಮ ದೇವಯ್ಯ, ದಯಾನಂದ್, ಸಿದ್ದಮಲ್ಲಮ್ಮ,ಭಾವನಾ ಗುರುಮೂರ್ತಿರವರು ಹಾಜರಿದ್ದರು.