ಸಾರಾಂಶ
Vasu, Dadu expelled from BSP: Krishnamurthy
-ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಹುಜನ ಸಮಾಜ ಪಾರ್ಟಿಯಿಂದ ಉಚ್ಛಾಟನೆ
------ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ತುರ್ತು ಸಭೆಯು ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರು, ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಹಿನ್ನೆಲೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿದ್ದ ಕೆ.ಬಿ.ವಾಸು ಹಾಗೂ ಜಿಲ್ಲಾದ್ಯಕ್ಷ ಅಬ್ದುಲ್ ಕರಿಮ್ (ದಾದು) ಅವರನ್ನು ಉಚ್ಛಾಟಿಸಲಾಗಿದೆ ಎಂದು ಪ್ರಕಟಿಸಿದರು.
ನ.19 ರಂದು ಜಿಲ್ಲಾ ಕಾರ್ಯಕರ್ತರ ಹಾಗೂ ಮುಖಂಡರ ಸರ್ವ ಪದಾಧಿಕಾರಿಗಳ ಸಭೆ ಕರೆದು ಹೊಸ ಪದಾಧಿಕಾರಿಗಳ ಆಯ್ಕೆ ಮಾಡುವಂತೆ ಸೂಚನೆ ನೀಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹಾದೇವ ಧನ್ನಿ, ಎಲ್.ಆರ್. ಭೋಸ್ಲೆ, ಕಲಬುರಗಿ ಜಿಲ್ಲಾ ಮುಖಂಡ ಮೈಲಾರಿ, ಯಾದಗಿರಿ ಜಿಲ್ಲಾ ಸಂಯೋಜಕ ಬಸವರಾಜ ಎಂ. ರಾಮಸಮುದ್ರ, ಉಪಾಧ್ಯಕ್ಷ ಆಫ್ರೀದಿ, ಪ್ರಧಾನ ಕಾರ್ಯದರ್ಶಿ ಭೀಮಶೆಪ್ಪ ಗಾಡದಾನ್ ಸಭೆಯಲ್ಲಿದ್ದರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಶೆಪ್ಪ ಗಾಡದಾನ್ ತಿಳಿಸಿದ್ದಾರೆ.------
8ವೈಡಿಆರ್10: ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ತುರ್ತು ಸಭೆಯು ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.