ಎಷ್ಟೋ ಗ್ರಾಮಗಳಿಗೆ ಇನ್ನು ಸರಿಯಾದ ಸಾರಿಗೆ ಸೌಕರ್ಯವಿಲ್ಲ. ಇಂಥ ಹೊತ್ತಿನಲ್ಲಿ ಗ್ರಾಮಕ್ಕೆ ಹತ್ತಿರದಲ್ಲಿರುವ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳೊಂದಿಗೆ ವಿಲೀನಗೊಳಿಸಿ ಮುಚ್ಚುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ತಾಲೂಕಿನ ಹೂಡಿಕೆ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ - ಮ್ಯಾಗ್ನೆಟ್ ಶಾಲೆಯ ಹೆಸರಿನಲ್ಲಿ ವಿಲೀನ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಕೆಪಿಎಸ್ ಶಾಲೆ ತೆರೆಯುವುದಕ್ಕೆ ನಮ್ಮ ವಿರೋಧವಿಲ್ಲ, ಆದರೆ, ಅದರ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಷ್ಟೋ ಗ್ರಾಮಗಳಿಗೆ ಇನ್ನು ಸರಿಯಾದ ಸಾರಿಗೆ ಸೌಕರ್ಯವಿಲ್ಲ. ಇಂಥ ಹೊತ್ತಿನಲ್ಲಿ ಗ್ರಾಮಕ್ಕೆ ಹತ್ತಿರದಲ್ಲಿರುವ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳೊಂದಿಗೆ ವಿಲೀನಗೊಳಿಸಿ ಮುಚ್ಚುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಮಂಡಳಿಯ ಸದಸ್ಯ ನವಾಜ್, ಜಿಲ್ಲಾ ಸಂಚಾಲಕ ರೋಹಿತ್, ಗ್ರಾಮಸ್ಥರಾದ ನಯನ್ , ಶ್ರೀಕಂಠಯ್ಯ, ಸಾರಥಿ , ಗೀತ , ರಾಧಾ ಹಾಗೂ ವಿದ್ಯಾರ್ಥಿಗಳು ಇದ್ದರು.