ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಅಧ್ಯಕ್ಷತೆಯಲ್ಲಿ ಮಂಗಳವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಅಧ್ಯಕ್ಷತೆಯಲ್ಲಿ ಮಂಗಳವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಇನ್ನು ಮುಂದಿನ ದಿನಗಳಲ್ಲಿ ನಮ್ಮ ಮಂಡಲದಲ್ಲಿ ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಬಿಡಿಗಾಸು ಅನುದಾನ ಬಂದಿಲ್ಲವಾದ ಕಾರಣ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇಂತಹ ಜನ ವಿರೋಧಿ ನೀತಿಗಳು ಕ್ಷೇತ್ರದ ಮನೆ ಮನೆಗೆ ತಲುಪುವಂತಾಗಬೇಕು ಎಂದರು. ಇತ್ತೀಚಿಗೆ ನಿಧನರಾದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್. ವಿನಯ ಹೆಗ್ಡೆಗೆ ರವಿಶಂಕರ್ ಮಿಜಾರ್ ರವರು ನುಡಿ ನಮನ ಸಲ್ಲಿಸಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್ ಹಾಗೂ ರಮೇಶ್ ಹೆಗ್ಡೆ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ, ಹಿರಿಯರಾದ ಮೋನಪ್ಪ ಭಂಡಾರಿ, ನಿತಿನ್ ಕುಮಾರ್ ಸೇರಿದಂತೆ ನಿಕಟಪೂರ್ವ ಪಾಲಿಕೆ ಸದಸ್ಯರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಕೋಷ್ಠಗಳ ಪ್ರಮುಖರು, ಶಕ್ತಿಕೇಂದ್ರಗಳ ಅಧ್ಯಕ್ಷರು ಸೇರಿದಂತೆ ಮಂಡಲದ ಎಲ್ಲ ಪದಾಧಿಕಾರಿಗಳು ಇದ್ದರು.ಮಂಡಲ ಉಪಾಧ್ಯಕ್ಷ ಗೌತಮ್ ಸಾಲ್ಯಾನ್ ಸ್ವಾಗತಿಸಿದರು. ಮಂಡಲ ಕಾರ್ಯದರ್ಶಿ ಸುರೇಖಾ ಹೆಗ್ಡೆ ವಂದಿಸಿದರು.