ಸಾರಾಂಶ
ಬಾಗಲಕೋಟೆ ಸಮೀಪದ ಮುಚಖಂಡಿಯಲ್ಲಿ ಅಮಾವಾಸ್ಯೆ ನಿಮಿತ್ತ ಐತಿಹಾಸಿಕ ವೀರಭದ್ರೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವ ಹಾಗೂ ಅನ್ನಸಂತರ್ಪಣೆ ಶ್ರದ್ಧೆ, ಭಕ್ತಿಯಿಂದ ಜರುಗಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸಮೀಪದ ಮುಚಖಂಡಿಯಲ್ಲಿ ಅಮಾವಾಸ್ಯೆ ನಿಮಿತ್ತ ಐತಿಹಾಸಿಕ ವೀರಭದ್ರೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವ ಹಾಗೂ ಅನ್ನಸಂತರ್ಪಣೆ ಶ್ರದ್ಧೆ, ಭಕ್ತಿಯಿಂದ ಜರುಗಿತು.ಗುರುವಾರ ಮುಚಖಂಡಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ವೀರಭದ್ರೇಶ್ವರನಿಗೆ ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಮೃತ್ಯುಂಜಯ ಮಂತ್ರ ಜಪ, ಪಂಚಾಕ್ಷರಿ ಮಂತ್ರ, ವಿರಭದ್ರೇಶ್ವರಸ್ವಾಮಿಯ ಅಷ್ಟೋತ್ತರ ಪಠಣ, ಪುಷ್ಪಾಲಂಕಾರ, ಮಹಾಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಮಧ್ಯಾಹ್ನ ವೀರಭದ್ರೇಶ್ವರಸ್ವಾಮಿಯ ಪಲ್ಲಕ್ಕಿ ಸೇವೆ, ಪುರವಂತರ ಸೇವೆಯೊಂದಿಗೆ ಸ್ವಾಮಿಯ ಬೆಳ್ಳಿ ರಥೋತ್ಸವ ಶ್ರದ್ಧೆ, ಭಕ್ತಿಯಿಂದ ಜರುಗಿತು. ನಂತರ ಶ್ರೀ ಭಗವತಿ ಅನ್ನಪೂಣೇಶ್ವರಿಗೆ ದೇವಿಗೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆಗೆ ಚಾಲನೆ ನೀಡಲಾಯಿತು.ವೀರಭದ್ರೇಶ್ವರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುರುಬಸವ ಸೂಳೀಬಾವಿ, ವೀರಭದ್ರೇಶ್ವರ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಪ್ರಭುಸ್ವಾಮಿ ಸರಗಣಾಚಾರಿ, ಸಂಗಯ್ಯ ಸರಗಣಾಚಾರಿ, ಅಪ್ಪು ಅಂಟೀನ, ಮಹೇಶ ಅಂಗಡಿ, ವೀರೇಶ ಅಥಣಿ, ಮುರಗೆಪ್ಪ ನಾರಾ, ರಾಜು ಹಲಕುರ್ಕಿ, ರಾಜು ಸಜ್ಜನ, ಸಂಗನಬಸವ ಗದ್ದಿ ಹಾಗೂ ಮುಚಖಂಡಿ ಗ್ರಾಮದ ಹಿರಿಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸಹಸ್ರಾರು ಭಕ್ತಾಧಿಗಳು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))