ಸಾರಾಂಶ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥವಾಗಿ ಜ.17 ರಿಂದ ಸಂಗೊಳ್ಳಿಯಲ್ಲಿ ನಡೆಯಲಿರುವ ಉತ್ಸವದ ಹಿನ್ನೆಲೆಯಲ್ಲಿ ನಂದಗಡದಿದ ಪ್ರಾರಂಭವಾದ ವೀರಜ್ಯೋತಿ ಯಾತ್ರೆಯನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥವಾಗಿ ಜ.17 ರಿಂದ ಸಂಗೊಳ್ಳಿಯಲ್ಲಿ ನಡೆಯಲಿರುವ ಉತ್ಸವದ ಹಿನ್ನೆಲೆಯಲ್ಲಿ ನಂದಗಡದಿದ ಪ್ರಾರಂಭವಾದ ವೀರಜ್ಯೋತಿ ಯಾತ್ರೆಯನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.ರಾಣಿ ಚನ್ನಮ್ಮ ವೃತ್ತದಲ್ಲಿ ಶಾಸಕ ಆಸೀಫ್ ಸೇಠ್, ಮೇಯರ್ ಶೋಭಾ ಸೋಮನಾಚೆ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವೀರಜ್ಯೋತಿ ಯಾತ್ರೆಯನ್ನು ಸ್ವಾಗತಿಸಿದರು. ಬಳಿಕ ಯಾತ್ರೆಯು ಕಾಕತಿ, ಹುಕ್ಕೇರಿ, ಸಂಕೇಶ್ವರ ಮೂಲಕ ನಿಪ್ಪಾಣಿಗೆ ತೆರಳಿತು. ಈ ಸಂದರ್ಭದಲ್ಲಿ ಉಪ ಮೇಯರ್ ರೇಷ್ಮಾ ಪಾಟೀಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮೊದಲಾದವರು ಉಪಸ್ಥಿತರಿದ್ದರು.