ಸಾರಾಂಶ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೇತೃತ್ವದಲ್ಲಿ ಇದೇ ಸೆ.19ಕ್ಕೆ ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರು ತಿಳಿಸಿದರು.
ರಾಯಚೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೇತೃತ್ವದಲ್ಲಿ ಇದೇ ಸೆ.19ಕ್ಕೆ ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರು ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದಲ್ಲಿ ಸಮಾಜದ ಮಹಾಸ್ವಾಮಿಜೀಗಳು, ಹರಗುರು ಚರಮೂರ್ತಿಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಸೇರಿದಂತೆ ರಾಜ್ಯದಿಂದ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದೇ ಸೆ.22 ರಿಂದ ನಡೆಯಲಿರುವ ಹಿಂದುಳಿದ ವರ್ಗಗಳ ಸಮೀಕ್ಷೆ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸಮಾವೇಶದಲ್ಲಿ ಚರ್ಚಿಸಿ ನಿರ್ಧರಕ್ಕೆ ಬರಲಿದ್ದು, ಈ ಹಿನ್ನೆಲೆ ಯಲ್ಲಿ ಸಮಾಜದ ಬಾಂಧವರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಭೀಮರೆಡ್ಡಿ, ಸೋಮನಾಥ ರೆಡ್ಡಿ ಗಣದಿನ್ನಿ, ಡಾ.ಪರಮೇಶ್ವರ ಸಾಲಿಮಠ, ನೀಲಕಂಠ, ನಿರ್ಮಲಾ ಬೆಣ್ಣೆ, ಸುಲೋಚನಾ ಆಲ್ಕೂರು, ಪ್ರತಿಭಾ ಗೋನಾಳ ಇದ್ದರು.