ಸಾರಾಂಶ
: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಡಿ.23, 24ರಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಎಚ್.ವಿ. ಶಿವಪ್ಪ ತಿಳಿಸಿದ್ದಾರೆ.
ಕುಶಾಲನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಡಿ.23, 24ರಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಎಚ್.ವಿ. ಶಿವಪ್ಪ ತಿಳಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ದಾವಣಗೆರೆ ನಗರದಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಈ ಸಂಬಂಧ ದಾವಣಗೆರೆ ಜಿಲ್ಲಾ ಘಟಕ ಎಲ್ಲ ರೀತಿಯ ಸಿದ್ಧತೆ ನಡೆಸಿದೆ. ಮಹಾ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರನ್ನು ಆಹ್ವಾನಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶರಣ ಶರಣೆಯರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.ಕೊಡಗು ಜಿಲ್ಲೆಯಿಂದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶರಣ ಶರಣೆಯರು ಈ ತಿಂಗಳ 17ರ ಒಳಗೆ ಮಹಾಸಭಾಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ ಅವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಗುಡ್ಡೆ ಹೊಸೂರು ಘಟಕದ ಪ್ರಮುಖರಾದ ಬಿ.ಸಿ. ಮಲ್ಲಿಕಾರ್ಜುನ ಇದ್ದರು.