ವೀರಶೈವ ಮಹಾಸಭಾ ಚುನಾವಣೆ; ನಾಮಪತ್ರ ಸಲ್ಲಿಕೆ

| Published : Jul 04 2024, 01:16 AM IST

ವೀರಶೈವ ಮಹಾಸಭಾ ಚುನಾವಣೆ; ನಾಮಪತ್ರ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿರುವ ಎರಡು ತಂಡಗಳ ಸದಸ್ಯರು ಬುಧವಾರ ನಾಮಪತ್ರ ಸಲ್ಲಿಸಿದರು.

ಬಳ್ಳಾರಿ: ಜುಲೈ 21ರಂದು ಜರುಗುವ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿರುವ ಎರಡು ತಂಡಗಳ ಸದಸ್ಯರು ಬುಧವಾರ ನಾಮಪತ್ರ ಸಲ್ಲಿಸಿದರು.ಎರಡು ತಂಡಗಳ ಸದಸ್ಯರು ಪ್ರತ್ಯೇಕವಾಗಿ ಮೆರವಣಿಗೆ ಮೂಲಕ ಇಲ್ಲಿನ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಗೆ ಆಗಮಿಸಿ ಉಮೇದುವಾರಿಕೆ ನೀಡಿದರು.

ಮಹಾಸಭಾದ ಹಾಲಿ ಅಧ್ಯಕ್ಷ ಚಾನಾಳ್ ಶೇಖರ್ ನೇತೃತ್ವದ ಶ್ರೀಹಾನಗಲ್ಲು ಕುಮಾರೇಶ್ವರ ತಂಡದ ಸದಸ್ಯರು ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಮೆರವಣಿಗೆ ಮೂಲಕ ವೀವಿ ಸಂಘದ ಕಚೇರಿಗೆ ಆಗಮಿಸಿದರೆ, ಪಂಚಾಕ್ಷರಪ್ಪ ನೇತೃತ್ವದ ತಂಡದ ಸದಸ್ಯರು ಬಸವ ಭವನದಿಂದ ಮೆರವಣಿಗೆಯಲ್ಲಿ ಆಗಮಿಸಿ, ಚುನಾವಣೆ ಅಧಿಕಾರಿಯಾಗಿ ನಿವೃತ್ತ ಪ್ರಾಂಶುಪಾಲ ಲಿಂಗನಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.

ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಎಚ್.ನಾಗರಾಜ್ ಹಾಗೂ ಡಾ. ವಿ.ಎಸ್‌. ಪ್ರಭಯ್ಯಸ್ವಾಮಿ ಕಾರ್ಯನಿರ್ವಹಿಸಿದರು.

ಎರಡು ತಂಡಗಳ ಕಡೆಯ ಬೆಂಬಲಿತ ಸದಸ್ಯರು ಹಾಗೂ ವೀರಶೈವ ಸಮಾಜದ ಮುಖಂಡರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

ಜುಲೈ 4 ನಾಮಪತ್ರ ಸಲ್ಲಿಸಲು ಹಾಗೂ ಹಿಂಪಡೆಯಲು ಜುಲೈ 8 ಕೊನೆಯ ದಿನವಾಗಿದೆ. ಜಿಲ್ಲಾ ಘಟಕಕ್ಕೆ ಓರ್ವ ಅಧ್ಯಕ್ಷ ಹಾಗೂ 10 ಮಹಿಳೆಯರು ಸೇರಿದಂತೆ 30 ಕಾರ್ಯಕಾರಿ ಸಮಿತಿ ಸದಸ್ಯರು, ತಾಲೂಕು ಘಟಕಕ್ಕೆ ಓರ್ವ ಅಧ್ಯಕ್ಷ 7 ಮಹಿಳೆಯರು ಸೇರಿದಂತೆ 20 ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.