ಸುಂಟಿಕೊಪ್ಪ: ಪೊಲೀಸ್‌ ಸಿಬ್ಬಂದಿಯಿಂದ ವಾಹನ ತಪಾಸಣೆ

| Published : Jun 09 2024, 01:32 AM IST

ಸಾರಾಂಶ

ಪಟ್ಟಣ ವ್ಯಾಪ್ತಿ ಪೊಲೀಸರು ವಾಹನ ತಪಾಸಣೆ ನಡೆಸಿ, ಸೂಕ್ತ ದಾಖಲಾತಿ ಇಲ್ಲದೆ ವಾಹನ ಚಲಾಯಿಸುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿ ಸೂಕ್ತ ದಾಖಲತಿ ಇಲ್ಲದ ವಾಹನ ಚಲಾಯಿಸುವವರ ವಿರುದ್ಧ ಹಾಗೂ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಪಟ್ಟಣದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿ ವಾಹನ ತಪಾಸಣೆ ನಡೆಸಿದರು.

ಚಾಲನ ಪರವಾನಗಿ ಇಲ್ಲದ ವಾಹನ ಚಲಾಯಿಸುವುದು, ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ವಾಹನಗಳಿಗೆ, ಜನಸಾಮಾನ್ಯರಿಗೆ ಅಡ್ಡಿಪಡಿಸುವುದು, ಅಪ್ರಾಪ್ತ ಯುವಕರು ವಾಹನ ಚಾಲನೆ ಮಾಡುವುದು, ಅನಧಿಕೃತವಾಗಿ ಆಟೋ ಬಾಡಿಗೆ ಚಲಾಯಿಸುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಶ್ರೀಧರ್ ಎಚ್ಚರಿಕೆ ನೀಡಿದರು.

ಹೆಲ್ಮೆಟ್ ಧರಿಸದ ಹಲವು ಸವಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಿದರು.