ವಾಹನ ಪಲ್ಟಿ: ಐವರಿಗೆ ಗಾಯ

| Published : Apr 01 2024, 12:54 AM IST

ಸಾರಾಂಶ

ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ಫಾರ್ಚುನರ್ ವಾಹನ ಪಲ್ಟಿ ಆಗಿರುವ ಘಟನೆ ಸಂಜೆ ಜರುಗಿದೆ. ಭಾನುವಾರ ಸಂಜೆ ಎಲ್ಲೇ ಮಾಳ ರಸ್ತೆಯಲ್ಲಿ ಫಾರ್ಚುನರ್ ವಾಹನ ಪಲ್ಟಿ ಯಾದ ವಾಹನದಲ್ಲಿ ಒಂದು ಮಗು ಸೇರಿ ಐವರು ಪ್ರಯಾಣಿಸುತ್ತಿದ್ದರು ಮಲ್ಲಿಕಾರ್ಜುನ್ ಎಂಬ ವ್ಯಕ್ತಿಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಉಳಿದಂತೆ ಎಲ್ಲರೂ ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರು

ಸರಣಿ ಅಪಘಾತಗಳಿಗೆ ರಸ್ತೆ ಕಾರಣ:

ಎಲ್ಲೇ ಮಾಳ ರಸ್ತೆಯಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ರಸ್ತೆ ಕಾಮಗಾರಿಯು ಅವೈಜ್ಞಾನಿಕವಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ನಡೆಯದೆ ಜಲ್ಲಿಕಲ್ಲು ಹಾಕಿ ಗುತ್ತಿಗೆದಾರರು ಸರಿಯಾದ ರೀತಿ ಸಮತಟ್ಟು ಮಾಡದಿರುವುದರಿಂದ ಅಪಘಾತಗಳು ಸಂಭವಿಸುತ್ತಿದೆ. ಈ ರಸ್ತೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು ದಿನೇ ದಿನೇ ಈ ರಸ್ತೆಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ಗುತ್ತಿಗೆದಾರರಿಗೆ ಕಾಮಗಾರಿ ವೈಜ್ಞಾನಿಕವಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಬೇಕು ಕಳೆದ ತಿಂಗಳು ರಸ್ತೆ ಕಾಮಗಾರಿ ಕುಂಟುತ್ತ ಸಾಗುತ್ತಿರುವುದರಿಂದ ಸಂಘಟನೆ ಒಂದು ಪ್ರತಿಭಟನೆ ನಡೆಸಿ ಒತ್ತಾಯಿಸಿದಾಗ ಯುಗಾದಿ ಹಬ್ಬದ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದರು. ಆದರೂ ಈ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗಿರುವುದರಿಂದ ಸರಣಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದೆ ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಮತ್ತು ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಆಗ್ರಹಿಸಿದ್ದಾರೆ.