ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ರೈತರು ಸಮಗ್ರ ಕೃಷಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಮಾತ್ರ ಹೆಚ್ಚು ಲಾಭ ಗಳಿಸಬಹುದು ಎಂದು ಅಭಿಪ್ರಾಯ ಪಟ್ಟರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕರಾದ ಶಾರದ ಮಾತನಾಡಿ, ಪ್ರತಿಯೊಬ್ಬರು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮುಂಚೆ ಮಣ್ಣು ಪರೀಕ್ಷೆ ಮಾಡಿಸುವಂತೆ ತಿಳಿಸಿದರು. ತೋಟಗಾರಿಕೆ ಇಲಾಖೆಯಿಂದ ಮತ್ತು ಕೃಷಿ ಇಲಾಖೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಬಿ.ಬಿ. ಲಲಿತರ ವಹಿಸಿದ್ದರು. ಕೃಷಿ ಮೇಲ್ವಿಚಾರಕ ಹರೀಶ್ ಕುಮಾರ್, ಲೇಖಕಿ ಪ್ರಿಯ, ಕೃಷಿ ಸಖಿ ಕಾವ್ಯ, ಸೌಮ್ಯ, ರೋಹಿಣಿ ಉಪಸ್ಥಿತರಿದ್ದರು.