ಸಾರಾಂಶ
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.
ಕನ್ನಪ್ರಭ ವಾರ್ತೆ ರಾಯಚೂರು
ತಾಲೂಕಿನ ಶಕ್ತಿನಗರದ ಕೃಷ್ಣಾ ನದಿ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆದರೆ, ಸಂಕ್ರಾಂತಿ ಹಬ್ಬ ಮತ್ತು ಮೈಲಾಪೂರು ಜಾತ್ರೆ ಹಿನ್ನೆಲೆಯಲ್ಲಿ ಜ.17ರವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಚಿಸಲಾಗಿದೆ ಎಂದು ಶಾಸಕ ಶಿವರಾಜ ಪಾಟೀಲ್ ತಿಳಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಒಂದು ವಾರದ ಹಿಂದೆ ಕೃಷ್ಣಾನದಿ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಕೃಷ್ಣಾನದಿ ಸೇತುವೆ ಮೇಲಿನ ಸಂಚಾರ ನಿಷೇಧಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ 14ರಂದು ಸಂಕ್ರಾಂತಿ ಹಬ್ಬ ಇರುವುದರಿಂದ ಜನರು ಸ್ನಾನಕ್ಕಾಗಿ ಕೃಷ್ಣಾ ನದಿಗೆ ತೆರಳುತ್ತಾರೆ. ಜೊತೆಗೆ ಯಾದಗಿರಿ ಜಿಲ್ಲೆಯ ಮೈಲಾಪೂರ ಮಲ್ಲಯ್ಯ ಜಾತ್ರೆ ಇದ್ದು, ಸಾವಿರಾರು ಭಕ್ತರು ಕೃಷ್ಣಾ ಸೇತುವೆ ಮಾರ್ಗದಲ್ಲಿ ತೆರಳುತ್ತಾರೆ. ಈ ಹಿನ್ನೆಲೆಯಲ್ಲಿ ಜ.17 ರವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಇದಕ್ಕೆ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.