ಕನ್ನಡಪ್ರಭವಾರ್ತೆ ಬೆಂಗಳೂರು
ಲೋಡ್ ಟೆಸ್ಟಿಂಗ್ ನಡೆಸುವ ಹಿನ್ನೆಲೆಯಲ್ಲಿ ಮೇ 5 ರಿಂದ 8 ರವರೆಗೆ ಪೀಣ್ಯ ಮೇಲ್ಸೆತುವೆ ಮೇಲೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಫ್ಲೈಓವರ್ ಮೇಲೆ ಅಳವಡಿಸಲಾದ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಅವುಗಳನ್ನು ಪರಿಶೀಲಿಸಲು ಮೂರು ದಿನಗಳ ಕಾಲ ಲೋಡ್ ಟೆಸ್ಟಿಂಗ್ ನಡೆಸುವ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಎಲ್ಲ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.ಮೇ 5 ರಂದು ಬೆಳಗ್ಗೆ 5 ಗಂಟೆಯಿಂದ ಮೇ 8ರಂದು ಬೆಳಿಗ್ಗೆ 11 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಮೇಲ್ಸೇತುವೆ ಮೇಲೆ ಕೆನ್ನಮೆಟಲ್ ವಿಡಿಯಾ ಅಪ್ಪರ್ ರಾಂಪ್ ಎಸ್‌ಆರ್‌ಎಸ್ ಡೌನ್ ರಾಂಪ್‌ವರೆಗೆ ಎರಡು ಕಡೆಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಪರ್ಯಾಯ ಮಾರ್ಗ: ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್‌ನ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ. ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮಾರ್ಗವಾಗಿ ಪಾರ್ಲೆ ಜಿ ಟೋಲ್ ತಲುಪಬಹುದಾಗಿದೆ ನಗರ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.