ಬೆಂಗಳೂರಿಗರೆ ಗಮನಿಸಿ : 1ವರ್ಷ ಇಲ್ಲಿ ವಾಹನ ಸಂಚಾರ ನಿರ್ಬಂಧ!

| Published : Mar 31 2024, 02:01 AM IST / Updated: Mar 31 2024, 05:36 AM IST

ಬೆಂಗಳೂರಿಗರೆ ಗಮನಿಸಿ : 1ವರ್ಷ ಇಲ್ಲಿ ವಾಹನ ಸಂಚಾರ ನಿರ್ಬಂಧ!
Share this Article
  • FB
  • TW
  • Linkdin
  • Email

ಸಾರಾಂಶ

ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನಲ್ಲಿರುವ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಏ.1ರಿಂದ ಮುಂದಿನ ಒಂದು ವರ್ಷ ಸಂಚಾರ ನಿರ್ಬಂಧಿಸಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ.

 ಬೆಂಗಳೂರು :  ಲಕ್ಕಸಂದ್ರ ಸುರಂಗ ಮೆಟ್ರೋ ರೈಲು ನಿಲ್ದಾಣದ ದಕ್ಷಿಣ ಪ್ರವೇಶದ್ವಾರ ಕಾಮಗಾರಿ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನಲ್ಲಿರುವ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಏ.1ರಿಂದ ಮುಂದಿನ ಒಂದು ವರ್ಷ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ನಿರಂತರವಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗದ ಸಂಚಾರವನ್ನು ಒಂದು ವರ್ಷ ಬಂದ್ ಮಾಡಲಾಗುತ್ತಿರುವುದರಿಂದ ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಹಾಗೂ ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಬಾಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯ ಆಗುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ.