ಕನ್ನಡದಲ್ಲಿ ಸರ್ವಜ್ಞ ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು ಮಹಾಕವಿ ಮಹಾಯೋಗಿ
ಕುಷ್ಟಗಿ: ಮಹಾಯೋಗಿ ವೇಮನರು 15ನೆಯ ಶತಮಾನದಲ್ಲಿ ಆಂಧ್ರ ಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ, ಸಮಾಜ ಚಿಂತಕರು, ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡದಲ್ಲಿ ಸರ್ವಜ್ಞ ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು ಮಹಾಕವಿ ಮಹಾಯೋಗಿಯಾಗಿದ್ದಾರೆ. ಮಹಾಯೋಗಿ ವೇಮನರು ಲೋಕ ಶಾಂತಿ ಸಾರಿದ ಮಹಾತ್ಮರು ಎಂದರು.ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ತಹಸೀಲ್ದಾರ್ ಅಶೋಕ ಶಿಗ್ಗಾಂವಿ, ಯುವ ಮುಖಂಡ ದೊಡ್ಡಬಸವನಗೌಡ ಬಯ್ಯಾಪುರ ಹಾಜರಿದ್ದರು.