ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್ ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

| Published : Apr 21 2024, 02:25 AM IST

ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್ ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಕಾಂಗ್ರೆಸ್ ಗೆ ಮತನೀಡಿ ನನ್ನನ್ನು ಗೆಲ್ಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.

ಕೆ.ಆರ್. ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ- 2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದರು.

ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ ಎಂದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಸಹಕಾರದಿಂದ, ಕೆ.ಆರ್. ನಗರದ ಅಭಿವೃದ್ಧಿಗೆ ರವಿಶಂಕರ್ ಜೊತೆಗೆ ನಾನು ಕೂಡ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ದೊಡ್ಡಸ್ವಾಮೇಗೌಡ ಮೊದಲಾದವರು ಇದ್ದರು.