ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರನ್ನಾಗಿ ಹನೂರು ವೆಂಕಟೇಶ್‌ರನ್ನು ಜಿಲ್ಲಾಧ್ಯಕ್ಷ ಸಿಎಸ್ ನಿರಂಜನ್ ಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರನ್ನಾಗಿ ಹನೂರು ವೆಂಕಟೇಶ್ ರವರನ್ನು ನೇಮಕ ಮಾಡಿರುವುದಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದ್ದಾರೆ. ಈ ವೇಳೆ ಬಿಜೆಪಿ ಯುವ ಮುಖಂಡ ಚಿರಂಜೀವಿ ಮಾತನಾಡಿ ಓಬಿಸಿ ಮೋರ್ಚ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿದ್ದ ಜನ ಧ್ವನಿ ಬಿ ವೆಂಕಟೇಶ್ ಕಳೆದ ಎರಡು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಿಸಿದ್ದ ಕೊರೋನಾ ಮಹಾಮಾರಿಗೆ ಹನೂರು ಕ್ಷೇತ್ರದ ಜನರು ಸಹ ತತ್ತರಿಸಿ ಹೋಗಿದ್ದರು. ಇಂತಹ ಸಂದರ್ಭದಲ್ಲಿ ಹನೂರು ಕ್ಷೇತ್ರದ 5 ಸಾವಿರ ಕುಟುಂಬಗಳಿಗೆ ಪಡಿತರ ವಿತರಣೆ ಮಾಡಿದ್ದರು. ನಿರಂತರವಾಗಿ ಎರಡು ಋಣ ಸಂದಾಯ ಆಂಬುಲೆನ್ಸ್ ಸಹ ಕ್ಷೇತ್ರದ ಜನರಿಗೆ ಮೀಸಲಿರಿಸಿದ್ದರು. ಕಳೆದ ಐದು ವರ್ಷಗಳಿಂದ ಹನೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಬಲವರ್ಧನೆ ಮಾಡುತ್ತಿದ್ದಾರೆ. ಇಂತಹ ಹಿಂದುಳಿದ ವರ್ಗದ ಸಮಾಜದ ವೆಂಕಟೇಶ್ ರವರಿಗೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ತಿಳಿಸಿದ್ಗಾರೆ.ರೈತ ಮೋರ್ಚಾಕ್ಕೆ ಎನ್‌ರಿಚ್:ಚಾಮರಾಜನಗರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಚಾ.ನಗರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್‌ರಿಎಚ್ ಮಹದೇವಸ್ವಾಮಿ ಅವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ರೈತರನ್ನು ಸಂಘಟನೆ ಮಾಡುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರೈತ ಪರವಾದ ಯೋಜನೆಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ಜಾರಿಯಾದ ರೈತರ ಕಲ್ಯಾಣಕ್ಕೆ ಜಾರಿ ಮಾಡಿರುವ ಕಾರ್ಯಕ್ರಮಗಳು ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಬಿಜೆಪಿ ರೈತ ಮೋರ್ಚಾವನ್ನು ಸಂಘಟನೆ ಮಾಡುವ ದೃಷ್ಟಿಯಿಂದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತಾವು ಇಂದಿನಿಂದಲೇ ಸಕ್ರಿಯವಾಗಿ ಪಕ್ಷ ಸಂಘಟನೆ ಮಾಡುವ ದಿಕ್ಕಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಎನ್‌ರಿಎಚ್ ಮಹದೇವಸ್ವಾಮಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದು, ಸಹಕಾರ ಪ್ರಗೋಷ್ಠದ ಸಂಚಾಲಕರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆ ಮಾಡಿದ್ದರು. ವಿವಿಧ ಮೋರ್ಚಾಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದರು. ಈಗ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.