ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಷ್ಠಿತ ಚರ್ಚಾ ಸ್ಪರ್ಧೆ ವರ್ಬೆಟಲ್ ಡಿಬೇಟ್ ಚಾಂಪಿಯನ್‌ಶಿಪ್ ಕರ್ನಾಟಕ ೨೦೨೬ರಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬ್ರಹ್ಮಾವರ: ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಷ್ಠಿತ ಚರ್ಚಾ ಸ್ಪರ್ಧೆ ವರ್ಬೆಟಲ್ ಡಿಬೇಟ್ ಚಾಂಪಿಯನ್‌ಶಿಪ್ ಕರ್ನಾಟಕ ೨೦೨೬ರಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜು. 8ರಿಂದ ಆ. 20ರವರೆಗೆ ವಿವಿಧ ಹಂತಗಳಲ್ಲಿ ಸ್ಪರ್ಧೆಗಳು ನಡೆದಿದ್ದು, ಅಂತಿಮವಾಗಿ ರಾಜ್ಯದ ನಾನಾ ಭಾಗಗಳಿಂದ 81 ತಂಡಗಳು ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಇದರಲ್ಲಿ ಜಿ.ಎಂ.ನ ನಾಲ್ಕು ತಂಡಗಳು ಆಯ್ಕೆಯಾಗಿದ್ದು, ತಮ್ಮ ಚಿಂತನಾ ಹಾಗೂ ಸಂವಹನ ಕೌಶಲ್ಯಗಳನ್ನು ಅನಾವರಣಗೊಳಿಸಿದರು. ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಪರೀಕ್ಷಿತ್ ಪಿ. ಶೆಟ್ಟಿ, ಸುಪಾರ್ಶ್ ಎ. ಶೆಟ್ಟಿ ಪ್ರಥಮ ಸ್ಥಾನ, 1 ಲಕ್ಷ ರು. ನಗದು ಬಹುಮಾನ, 9ನೇ ತರಗತಿಯ ಸನಿಹ ಬಿ., ನಿಹಾರಿಕಾ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಯನ್ನು ಪ್ರಶಂಸಿಸಿರುವ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಪ್ರಾಂಶುಪಾಲ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.