ರಾಜ್ಯ ಸರ್ಕಾರ ವಜಾ ಮಾಡಲು ವಿಎಚ್‌ಪಿ ಆಗ್ರಹ

| Published : Dec 09 2023, 01:15 AM IST

ರಾಜ್ಯ ಸರ್ಕಾರ ವಜಾ ಮಾಡಲು ವಿಎಚ್‌ಪಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ವಜಾ ಮಾಡಲು ವಿಎಚ್‌ಪಿ ಆಗ್ರಹಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ

-ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸಂವಿಧಾನ ವಿರೋಧಿಯಾಗಿದೆ. ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಎಚ್‌ಪಿ ಮತ್ತು ಭಜರಂಗದಳ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಶುಕ್ರವಾರ ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ಕೊಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ಸಿಎಂ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಸ್ಲೀಂ ಧರ್ಮಗುರುಗಳ ಸಮಾವೇಶದಲ್ಲಿ ಶಂಕಿತ ಐಸಿಸ್ ಬಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಮನವಿ ಸಲ್ಲಿಸಿದ ಸಂದರ್ಭದಲ್ಲಿ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ರಂಗನಾಥ, ಬಜರಂಗದಳ ಜಿಲ್ಲಾ ಸಂಯೋಜಕ ಸಿ.ಡಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಯೋಗೀಶ್‌ ರಾಜ್‌ ಅರಸ್‌, ಶ್ಯಾಮ್‌, ಕೋಟೆ ಪ್ರಸಾದ್‌, ಕೃಷ್ಣ ಹಾಜರಿದ್ದರು. 8 ಕೆಸಿಕೆಎಂ 4

ರಾಜ್ಯ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿ ವಿಎಚ್‌ಪಿ ಹಾಗೂ ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.