ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ವಿಹಿಂಪ ಆಗ್ರಹ

| Published : Apr 21 2024, 02:25 AM IST

ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ವಿಹಿಂಪ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠರನ್ನು ಹತ್ಯೆಗೈದವನ ಮೇಲೆ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಶನಿವಾರ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಹಿರಿಯೂರು: ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠರನ್ನು ಹತ್ಯೆಗೈದವನ ಮೇಲೆ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಶನಿವಾರ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಕಾರ್ಯಕರ್ತರು ಹುಬ್ಬಳ್ಳಿಯ ಕಾಲೇಜ್ ಕ್ಯಾಂಪಸ್ ನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಹಿಂದೂ ಯುವತಿ ನೇಹಾರನ್ನು ಮುಸ್ಲಿಂ ಯುವಕ ಫಯಾಜ್ ಎಂಬ ಕ್ರೂರಿ ಚಾಕುವಿನಿಂದ ಇರಿದು ಕೊಂದಿರುವುದು ಅವರ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ. ಈ ಪ್ರಕರಣದಿಂದ ವಿದ್ಯಾಭ್ಯಾಸಕ್ಕೆ ತೆರಳಿದ ಮಕ್ಕಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ. ಫಯಾಜ್‌ನ ಈ ಕ್ರೂರ ಕೃತ್ಯ ಆತನ ಕ್ರೌರ್ಯತೆಯನ್ನು ಬಿಂಬಿಸುತ್ತದೆ. ಫಯಾಜ್ ನಂತಹ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಇಂತಹ ಕೃತ್ಯಗಳು ಮತ್ತೆoದು ಮರುಕಳಿಸದಂತೆ ನೋಡಿಕೊಳ್ಳಬೇಕಾಗಿದೆ. ಕೂಡಲೇ ಈತನ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳುವುದರ ಮೂಲಕ ಇನ್ನು ಮುಂದೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀನಿವಾಸ್ ಮಸ್ಕಲ್, ತಾಲೂಕು ಕಾರ್ಯದರ್ಶಿ ವೆಂಕಟೇಶ್, ಗೋವರ್ದನ್, ಬಜರಂಗದಳ ಗೋ ರಕ್ಷಾ ಪ್ರಮುಖ್ ವಿಶ್ವನಾಥ್, ಉಪಾದ್ಯಕ್ಷ ಗೋವಿಂದಾಚಾರ್, ಚರಣ್, ನಗರ ಸಭೆ ಸದಸ್ಯ ಪಲ್ಲವ, ಹರೀಶ್, ಮುತ್ತುರಾಜ್ ಮುಂತಾದವರು ಹಾಜರಿದ್ದರು.

------

ನಗರದ ತಾಲೂಕು ಕಚೇರಿಗೆ ಶನಿವಾರ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ನೇಹಾ ಕೊಲೆ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಸಲ್ಲಿಸಲಾಯಿತು.