ಸಾರಾಂಶ
ವಿದ್ಯಾರ್ಥಿಗಳಿಂದ ಪ್ರತಿದಿನವೂ ಒಂದೊಂದು ರಂಗೋಲಿ ಚಿತ್ರ ಬಿಡಿಸಿ ಅವರ ಕಲಾ ಪ್ರತಿಭೆ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಲಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಉತ್ಸಾಹದಿಂದ ಈ ಸಂಭ್ರಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಅಂಗಸಂಸ್ಥೆ ಬಿಜಿಎಸ್ ಐಟಿ ಕಾಲೇಜಿನಲ್ಲಿ 9 ದಿನಗಳ ಕಾಲ ಶರನ್ನವರಾತ್ರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶರನ್ನವರಾತ್ರಿಯ 9 ದಿನಗಳ ಅವಧಿಯಲ್ಲಿ ಶೈಲಪುತ್ರಿ, ಕೂಷ್ಮಾಂಡಾ, ಕಾತ್ಯಾಯಿನಿ ಸೇರಿದಂತೆ ನವದುರ್ಗಿಯರನ್ನು ಪೂಜಿಸಲಾಗುತ್ತಿದೆ. ಶಾಸ್ತ್ರಗಳ ಜೊತೆಗೆ ದಿನಕ್ಕೊಂದು ಬಣ್ಣ ಮತ್ತು ಪ್ರಸಾದವನ್ನು ಸೂಚಿಸಿರುವಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪ್ರತಿದಿನವೂ ನಿಗದಿತ ಬಣ್ಣದ ಉಡುಗೆ- ತೊಡುಗೆಗಳನ್ನು ಧರಿಸಿ ನಿಗದಿತ ಬಗೆಯ ಪ್ರಸಾದದೊಂದಿಗೆ ದೇವಿ ಆರಾಧನೆಯನ್ನು ಶಾಸ್ತ್ರೋಕ್ತವಾದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಶರನ್ನವರಾತ್ರಿ ಪ್ರಯುಕ್ತ ರಂಗೋಲಿ ಸ್ಪರ್ಧೆ ನಡೆಯಿತು.ವಿದ್ಯಾರ್ಥಿಗಳಿಂದ ಪ್ರತಿದಿನವೂ ಒಂದೊಂದು ರಂಗೋಲಿ ಚಿತ್ರ ಬಿಡಿಸಿ ಅವರ ಕಲಾ ಪ್ರತಿಭೆ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಲಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಉತ್ಸಾಹದಿಂದ ಈ ಸಂಭ್ರಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಭಾರತೀಯ ಸಂಸ್ಕೃತಿ ಉತ್ತಮವಾದ ಅಂಶಗಳನ್ನು ಉಳಿಸಿಕೊಳ್ಳುವ ಮತ್ತು ಅಳವಡಿಸಿಕೊಳ್ಳುವ ಒಂದು ಉಪಕ್ರಮವಾಗಿ ಕಾಲೇಜಿನಲ್ಲಿ ಈ ಉತ್ಸವಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಡಾ. ಬಿ.ಎನ್. ಶೋಭ ತಿಳಿಸಿದ್ದಾರೆ.ಅ.16 ರಂದು ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
ಹಲಗೂರು: ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಅ.16 ರಂದು ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು, ಡಿಸಿಎಂ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಭಾಗವಹಿಸಲಿದ್ದಾರೆ. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್, ಇತರೆ ಸಚಿವರು, ಸಂಸದರು, ಶಾಸಕರು ಭಾಗವಹಿಸುವರು.