ಇಂದು ಜೈನಕಾಶಿ ಶ್ರವಣಬೆಳಗೊಳಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆಗಮನ

| Published : Nov 09 2025, 02:00 AM IST

ಇಂದು ಜೈನಕಾಶಿ ಶ್ರವಣಬೆಳಗೊಳಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆಗಮನ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗ್ಗೆ 8.45ಕ್ಕೆ ಶ್ರವಣಬೆಳಗೊಳದ ಹೆಲಿಪ್ಯಾಡ್‌ಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಚಿವ ಡಿ.ಸುಧಾಕರ್, ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನ.9ರಂದು ನಾಲ್ಕನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ಜರುಗಲಿದ್ದು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಶ್ರವಣಬೆಳಗೊಳದ ಹೆಲಿಪ್ಯಾಡ್‌ಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಚಿವ ಡಿ.ಸುಧಾಕರ್, ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಲಿದ್ದಾರೆ. ಶಾಸಕರಾದ ಅಭಯ್ ಚಂದ್ರ ಪಾಟೀಲ, ಎಂಎಲ್‌ಸಿ ಡಾ.ಸೂರಜ್ ರೇವಣ್ಣ, ರಾಜ್ಯಸಭಾ ಸದಸ್ಯ ನವೀನ್ ಜೈನ್ ಹಾಗೂ ಮಹಾರಾಷ್ಟ್ರದ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಶ್ರೀ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಬೆಳಗ್ಗೆ 9.05ಕ್ಕೆ ಬೆಟ್ಟದ ನಾಮಕರಣ ಮತ್ತು ವಿಗ್ರಹ ಅನಾವರಣ ಮಾಡಲಿದ್ದಾರೆ. 10: 15ಕ್ಕೆ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಲಿದ್ದಾರೆ. ಹದಿನೈದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮಾನವ ರಹಿತ ಏರ್‌ಕ್ರಾಫ್ಟ್ ಹಾಗೂ ಏರ್ ಬಲೂನ್ ಬಳಕೆ ಮತ್ತು ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದು, ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.