ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

| Published : Jun 05 2024, 12:30 AM IST

ಸಾರಾಂಶ

ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು

ಲಕ್ಷ್ಮೇಶ್ವರ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲವು ಸಾಧಿಸಿದ ಹಿನ್ನೆಲೆ ಲಕ್ಷ್ಮೇಶ್ವರ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಶಾಸಕ ಚಂದ್ರು ಲಮಾಣಿ ಮಾತನಾಡಿ, ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದು ನಿಶ್ಚಿತವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಎನ್‌ಡಿಎ ಒಕ್ಕೂಟಕ್ಕೆ ಜನರು ಆರ್ಶಿವಾದಿಸಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರು. ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಹಾಗೂ ಅವರ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ನಗರ ಘಟಕದ ಅಧ್ಯಕ್ಷ ಅನಿಲ ಮುಳಗುಂದ, ಸೋಮಣ್ಣ ಮಹಾಂತಶೆಟ್ಟರ, ಪೂರ್ಣಾಜಿ ಕರಾಟೆ, ಸೋಮಣ್ಣ ಉಪನಾಳ, ಗಂಗಾಧರ ಮೆಣಸಿನಕಾಯಿ, ನವೀನ ಬೆಳ್ಳಟ್ಟಿ, ಶಕ್ತಿ ಕತ್ತಿ, ವಿಜಯ ಕುಂಬಾರ, ಅಶೋಕಗೌಡ ಪಾಟೀಲ, ಶಿವಯೋಗಿ ಅಂಕಲಕೋಟಿ, ರಾಜು ಅಂದಲಗಿ, ಬಸವರಾಜ ಚಕ್ರಸಾಲಿ, ಜಗದೀಶಗೌಡ ಪಾಟೀಲ, ಎಂ.ಆರ್. ಪಾಟೀಲ, ಟಾಕಪ್ಪ ಸಾತಪೂತೆ, ದುಂಡೇಶ ಕೊಟಗಿ, ರುದ್ರಪ್ಪ ಉಮಚಗಿ ಸೇರಿದಂತೆ ಅನೇಕರು ಇದ್ದರು.