ಕನ್ನಡಪ್ರಭ ವಾರ್ತೆ ಕೊಲ್ಹಾರ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಗಾಂಧೀಜಿ ಸರ್ಕಲ್ ನಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಗಾಂಧೀಜಿ ಸರ್ಕಲ್ ಬಳಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಪರ ಘೋಷಣೆ ಕೂಗಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ.ಪಕಾಲಿ ಮಾತನಾಡಿ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಮತ ನೀಡಿ ಅಭೂತ ಪೂರ್ವ ಗೆಲವು ತಂದುಕೊಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಎರಡು ಕ್ಷೇತ್ರದ ಮತದಾರ ಪ್ರಭುಗಳಿಗೆ ಕೊಲ್ಹಾರ ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.ಮುಖಂಡ ಎಂ.ಆರ್.ಕಲಾದಗಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ಕೊಟ್ಟ ಕೊಡುಗೆಗಳೇ ಇಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಕಾರಣ. ಕಾಂಗ್ರೆಸ್ ಪಕ್ಷ ಯಾವತ್ತೂ ಜನರ ಪರ ಇರುತ್ತದೆ ಎನ್ನುವುದಕ್ಕೆ ಇವೆರಡು ಫಲಿತಾಂಶಗಳೇ ಕಾರಣ ಎಂದರು.ಪಪಂ ಸದಸ್ಯರಾದ ತೌಸಿಪ ಗಿರಗಾಂವಿ, ಶ್ರೀಶೈಲ ಮುಳವಾಡ ಮಾತನಾಡಿದರು.

ಪಪಂ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೊಳ, ಮುಖಂಡರಾದ ಮಹ್ಮದಹನೀಫ ಮಕಾನದಾರ, ಬನಪ್ಪ ಬಾಲಗೊಂಡ, ದಶರಥ ಈಟಿ, ಇಕ್ಬಾಲ್ ನದಾಫ್, ದಸ್ತಗೀರ ಕಲಾದಗಿ, ರಾಜು ಇವಣಗಿ, ಯಮನಪ್ಪ ಮಾಕಾಳೆ, ಸಿಡ್ಲೆಪ್ಪ್ ತಳಗೇರಿ , ಅಬ್ದುಲ ರಜಾಕ್ ಪಕಾಲಿ, ಅನ್ವರ್ ಕಂಕರಪೀರ ಇತರರು ಇದ್ದರು.