ಹಾವೇರಿ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪ ಚುನಾವಣೆಯ ಗೆಲುವು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರಿಗೆ ಸಿಕ್ಕ ಜಯವಾಗಿದೆ. ರಾಜ್ಯದ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ನಾಯಕತ್ವವನ್ನು ಜನರು ಒಪ್ಪಿಕೊಂಡು ಎರಡೂ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿ ಗೆಲುವು ತಂದುಕೊಟ್ಟಿದ್ದಾರೆ. ಮುಂಬರುವ 2028ರ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸರಕಾರಕ್ಕೆ ಶಕ್ತಿಯನ್ನು ತುಂಬಿದ್ದಾರೆ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪಕ್ಷದ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿ ಗೆಲುವು ತಂದುಕೊಟ್ಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಾಯಕತ್ವದಲ್ಲಿ ನಮ್ಮ ಸರಕಾರ ಜನಪರ ಆಡಳಿತ ನಡೆಸುತ್ತಿದೆ. ಮುಂಬರುವ ದಿನಗಳಲ್ಲೂ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಲಿದ್ದೇವೆ ಎಂದು ತಿಳಿಸಿದರು.ಈ ವೇಳೆ ಕೆಸಿಸಿ ಬ್ಯಾಂಕಿನ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಸನ್ನ ಹಿರೇಮಠ, ಉಮರ್ ಇನಾಮದಾರ, ಶಕೀಲ್ ನದಾಫ, ಜಮೀರ್ ಜಿಗರಿ, ಜಗದೀಶ್ ಬೆಟಗೇರಿ, ಬಸವರಾಜ ಜಾಬಿನ, ಮುತ್ತು ಕೊರವರ, ಕರಬಸಪ್ಪ ಹಲಗಣ್ಣವರ, ಮಹಾಲಿಂಗಯ್ಯ ಪಾಟೀಲ, ಶಿವರಾಜ ಮತ್ತಿಹಳ್ಳಿ, ಬಾಬುಸಾಬ್ ಮೊಮಿನಗಾರ, ಸಿ.ಎಸ್ ಲಕ್ಷ್ಮೇಶ್ವರಮಠ, ಗುಡ್ಡನಗೌಡ ಅಂದಾನಿಗೌಡ್ರ, ಅತಾವುಲ್ಲಾ ಖಾಜಿ, ಮಲ್ಲೇಶಪ್ಪ ಪಟ್ಟಣಶೆಟ್ಟಿ, ರಾಜು ಡೊಳ್ಳಿನ, ಪ್ರೇಮಾ ಪಾಟೀಲ, ಶಾಂತಕ್ಕ ಶಿರೂರ, ಮಮತಾ ಜಾಬೀನ್, ಗೀತಾ ಪ್ರಕಾಶ, ನಂದಾ ಕಳಸದ, ಜಯಶ್ರೀ ಶಿವಪುರ, ವೀಣಾ ಹಲಗಣ್ಣವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಉಪಚುನಾವಣೆಯಲ್ಲಿ ಗೆಲುವು, ಕೈ ಕಾರ್ಯಕರ್ತರಿಂದ ವಿಜಯೋತ್ಸವ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.