ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ಜಯ ಸಾಧ್ಯ: ವಿದ್ಯಾಧರ್ ಜಾಕಾ

| Published : Aug 23 2024, 01:07 AM IST

ಸಾರಾಂಶ

Victory is possible only when we fight unitedly: Vidyadhar Jaka

-ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ನಡೆದ ಸಭೆಯಲ್ಲಿ ನೂತನ ಗ್ರಾಮ ಘಟಕ ರಚನೆ

----

ಕನ್ನಡಪ್ರಭ ವಾರ್ತೆ ವಡಗೇರಾ

ರೈತರ ಸಮಸ್ಯೆಗಳ ಕುರಿತು ಪ್ರತಿಯೊಬ್ಬರು ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ಜಯ ಕಾಣಲು ಸಾಧ್ಯ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ) ಬಣದ ವಡಗೇರಾ ತಾಲೂಕಾಧ್ಯಕ್ಷ ವಿದ್ಯಾಧರ್ ಜಾಕಾ ಹೇಳಿದರು. ತೇಕರಾಳದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.

ನೀರಾವರಿ ಹಾಗೂ ಗ್ರಾಮೀಣ ಭಾಗದ ರಸ್ತೆಗಳು ಮತ್ತು ತಾಲೂಕಿಗೆ ಸಂಬಂಧಿಸಿದಂತೆ ಇನ್ನುಳಿದ ಸಮಸ್ಯೆಗಳ ವಿರುದ್ಧ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.

ಸಂಘಟನೆಯ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ ಮತ್ತು ಗ್ರಾಮದ ರೈತರ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ನಮ್ಮ ಗಮನಕ್ಕೆ ತನ್ನಿ, ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

ಗ್ರಾಮ ಘಟಕದ ಅಧ್ಯಕ್ಷರಾಗಿ ಸಾಬಣ್ಣ ಶಹಾಪುರ, ಉಪಾಧ್ಯಕ್ಷರಾಗಿ ಮರಿಗೌಡ ಹೊಸಮನಿ ಅವರನ್ನು ನೇಮಕ ಮಾಡಲಾಯಿತು.

ರೈತ ಸಂಘದ ಮುಖಂಡರಾದ ಶರಣು ಜಡಿ, ಸತೀಶ್ ಪೂಜಾರಿ, ಮಲ್ಲು ನಾಟೇಕಾರ, ನಾಗರಾಜ್ ಸ್ವಾಮಿ, ಅಪ್ಪಾಜಿ ಕಲ್ಲಪ್ಪನೂರ್ ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು ಸದಸ್ಯರು ಇದ್ದರು.

------

22ವೈಡಿಆರ್7: ವಡಗೇರಾ ತಾಲೂಕಿನ ತೇಕರಾಳ ಗ್ರಾಮದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ನಡೆದ ಸಭೆಯಲ್ಲಿ ನೂತನ ಗ್ರಾಮ ಘಟಕ ರಚನೆ ಮಾಡಲಾಯಿತು.