ಶಿಗ್ಗಾಂವಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

| Published : Nov 16 2025, 02:30 AM IST

ಸಾರಾಂಶ

ಶಿಗ್ಗಾಂವಿ ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಶಿಗ್ಗಾಂವಿ: ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಹರವಿ ಮಾತನಾಡಿ, ಬಿಹಾರದಲ್ಲಿ ಬಿಜೆಪಿ ಗೆಲವು ಸಾಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಕಾರಣವಾಗಿದೆ. ಕೇಂದ್ರ ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಕ್ರಾಂತಿ ಮಾಡಿದೆ. ಹತ್ತಾರು ಹೊಸ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಅಭಿವೃದ್ಧಿ ಪರ್ವ ನಡೆದಿದೆ. ಹೀಗಾಗಿ ದೇಶದ ಜನ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮಾನ್ಯತೆ ನೀಡುತ್ತಿದ್ದಾರೆ ಎಂದರು.ಮುಖಂಡರಾದ ಶಿವಪ್ರಸಾದ ಸುರಗಿಮಠ, ಮಲ್ಲೇಶಪ್ಪ ಹರಿಜನ, ಯಶೋಧಾ ಪಾಟೀಲ, ದಯಾನಂದ ಅಕ್ಕಿ, ಮಂಜುನಾಥ ಬ್ಯಾಹಟ್ಟಿ, ರಮೇಶ ವನಹಳ್ಳಿ, ತಿಪ್ಪಣ್ಣ ಸಾತಣ್ಣವರ, ಕರಿಯಪ್ಪ ಕಟ್ಟಿಮನಿ, ರವಿ ಚವ್ಹಾಣ, ರೇಣುಕಗೌಡ ಪಾಟೀಲ, ಅನಿಲ ಸಾತಣ್ಣವರ, ಹನುಮಂತಪ್ಪ ಗುಳೇದ, ದೇವು ಸೊರಟೂರ, ಸತೀಶ ಬಾಣದ, ಕಾಶೀನಾಥ ಕಳ್ಳಿಮನಿ, ಪ್ರತೀಕ್ ಕೊಳೆಕರ, ಪ್ರಶಾಂತ ಬಡ್ಡಿ, ಮಂಜು ಮಿರಜಕರ, ಮುತ್ತು ಯಲಿಗಾರ, ಸಚಿನ ಮಡಿವಾಳರ, ಶ್ರೀಕಾಂತ ವಾಲೀಕಾರ, ಶಿವಯೋಗಿ ಹುಲಸೋಗಿ, ರವಿ ಬಿಶೆಟ್ಟಿ, ಮಹದೇವ ಹಡಪದ, ಪ್ರಕಾಶ ಆರೇರ್ ಸೇರಿದಂತೆ ಅನೇಕ ಮುಖಂಡರು ಇದ್ದರು.