ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಕಾರಣರಾದ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಕೃತಜ್ಞತೆ ಸಲ್ಲಿಸಿದರು.ಕಳೆದ ಸಾಲಿನ ಮನ್‌ಮುಲ್ ಚುನಾವಣೆಯಲ್ಲಿ ಸಹಕಾರಿ ಬಂಧುಗಳು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಸಹಕಾರಿ ಬಂಧುಗಳು ಆಶೀರ್ವದಿಸಿರುವುದನ್ನು ಉಳಿಸಿಕೊಳ್ಳುವುದಾಗಿ ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದರು.
ಚುನಾವಣೆ ಸಂಬಂಧ ಮಾಜಿ ಸಚಿವರು ಅಧಿಕಾರಿಗಳಿಗೆ ಬೆದರಿಸಿರುವ ಸುಳ್ಳು ಆರೋಪ ಮಾಡಿದ್ದರು. ಇದೀಗ ಜನತಾ ತೀರ್ಪು ಅಂತಹ ಉರುಳಿಲ್ಲದ ಆರೋಪಗಳಿಗೆ ತಕ್ಕ ಉತ್ತರ ನೀಡಿದೆ. ಲೋಕಸಭೆ ಚುನಾವಣೆ ನಂತರ ಮಂಡ್ಯ ಜಿಲ್ಲಾ ಮಟ್ಟದಲ್ಲಿ ನಡೆದ ಪ್ರಥಮ ಚುನಾವಣೆಯಲ್ಲಿ ಸಹಕಾರಿ ಬಂಧುಗಳು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್‌ಗೆ ಆರ್ಥಿಕ ಶಕಕ್ತಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಎಲ್ಲಾ ಶಾಸಕರ ಅಭಿವೃದ್ಧಿ ಕಾರ್ಯಗಳೀಗೆ ಆಶೀರ್ವಾದ ಮಾಡಿದ್ದಾರೆ ಎಂದರು.ಗೋಷ್ಠಿಯಲ್ಲಿ ನಗರಸಭೆ ಸದಸ್ಯ ಶ್ರೀಧರ್, ರುದ್ರಪ್ಪ, ಚಂದಗಾಲು ವಿಜಯಕುಮಾರ್, ಕೆ.ಎನ್.ನಾಗರಾಜು, ಉದಯ್ ಇದ್ದರು.ಸಿಇಒರಿಂದ ಇಂದು, ನಾಳೆ ತಾಲೂಕುವಾರು ಸಭೆ
ಮಂಡ್ಯ:ಜಿಲ್ಲಾ ಪಂಚಾಯ್ತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಜಿಲ್ಲೆಯ ಕೇಂದ್ರ, ರಾಜ್ಯ ಪುರಸ್ಕೃತ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲು ಫೆ.4 ಮತ್ತು 5 ರಂದು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಸಭೆ ನಡೆಸಲಿದ್ದಾರೆ. ಫೆ.4 ರಂದು ಬೆಳಗ್ಗೆ 10 ಗಂಟೆಗೆ ನಾಗಮಂಗಲ, ಮಧ್ಯಾಹ್ನ 12:30 ಗಂಟೆಗೆ ಮದ್ದೂರು, 3 ಗಂಟೆಗೆ ಮಳವಳ್ಳಿ, ಹಾಗೂ ಫೆ.5 ರಂದು ಬೆಳಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ, ಮಧ್ಯಾಹ್ನ 12 ಗಂಟೆಗೆ ಪಾಂಡವಪುರ ಮತ್ತು ಮಧ್ಯಾಹ್ನ 2:30 ಗಂಟೆಗೆ ಕೆ. ಆರ್. ಪೇಟೆಯಲ್ಲಿ ಆಯಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕುವಾರು ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯತ್‌ಗಳ ಪಂಜಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕಡ್ದಾಯವಾಗಿ ಹಾಜರಿರುವಂತೆ ತಿಳಿಸಲಾಗಿದೆ.