ಕಾಂಗ್ರೆಸ್‌ ಅಭ್ಯರ್ಥಿಗಳ ಜಯ: ವಿಜಯೋತ್ಸವ

| Published : Nov 24 2024, 01:48 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಜ್ಯದ ಮೂರು ವಿಧಾನಸಭಾ ಮತಕ್ಷೇತ್ರಗಳಿಗೆ ಜರುಗಿದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವಾನಂದ ಪಾಟೀಲ ಪಟ್ಟಣದ ಆರಾದ್ಯದೈವ ಮೂಲನಂದೀಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ರಾಜ್ಯದ ಮೂರು ವಿಧಾನಸಭಾ ಮತಕ್ಷೇತ್ರಗಳಿಗೆ ಜರುಗಿದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವಾನಂದ ಪಾಟೀಲ ಪಟ್ಟಣದ ಆರಾದ್ಯದೈವ ಮೂಲನಂದೀಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಬಸವೇಶ್ವರ ವೃತ್ತಕ್ಕೆ ತೆರಳಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಲ್ಲದೇ, ಕಾಂಗ್ರೆಸ್‌ ಪರ ಘೋಷಣೆಗಳನ್ನು ಕೂಗಿ ಪಟಾಕಿಗಳನ್ನು ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.ಈ ವೇಳೆ ಮಾತನಾಡಿದ ಅವರು, ನಿರೀಕ್ಷೆಯಂತೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿರುವದು ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನಮೆಚ್ಚುಗೆ ಪಡೆದಿವೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಸದಾ ಬದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಂಭ್ರಮಾಚರಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಅನಿಲ ಅಗರವಾಲ, ಸಂಗಮೇಶ ಓಲೇಕಾರ, ಬಾಲಚಂದ್ರ ಮುಂಜಾನೆ, ಶೇಖರ ಗೊಳಸಂಗಿ, ಎಂ.ಜಿ.ಆದಿಗೊಂಡ, ಬಸವರಾಜ ಕೋಟಿ, ಚಂದ್ರಶೇಖರಗೌಡ ಪಾಟೀಲ, ಶಂಕರಗೌಡ ಬಿರಾದಾರ, ಸುರೇಶಗೌಡ ಪಾಟೀಲ, ಪಂಚಾಕ್ಷರಿ ಕಾಳಹಸ್ತೇಶ್ವರಮಠ, ಪ್ರವೀಣ ಪೂಜಾರಿ, ರಮಜಾನ ಹೆಬ್ಬಾಳ, ಮಹಾಂತೇಶ ಸಾಸಾಬಾಳ, ಪರಶುರಾಮ ಜಮಖಂಡಿ, ಸಂಗನಬಸು ಪೂಜಾರಿ, ಬಸವರಾಜ ರಾಯಗೊಂಡ, ಸಂಕನಗೌಡ ಪಾಟೀಲ, ಅನಿಲ ಪವಾರ, ದಸ್ತಗೀರ ವಜ್ಜಲ, ಎಂ.ಎಲ್.ನಾಯ್ಕೋಡಿ ಸೇರಿದಂತೆ ಇತರರು ಭಾಗವಹಿಸಿದ್ದರು.