ಮುದ್ದಂಡ ಹಾಕಿ ಕಪ್‌ನ ಭಾನುವಾರ ನಡೆದ ಪಂದ್ಯದಲ್ಲಿ ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಗಳು ಗೆಲುವು ಸಾಧಿಸಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್‌ನ ಭಾನುವಾರ ನಡೆದ ಪಂದ್ಯದಲ್ಲಿ ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಗಳು ಗೆಲವು ಸಾಧಿಸಿತು.

ಕೂತಂಡ ಮತ್ತು ಪೆಮ್ಮಂಡ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೂತಂಡ ತಂಡ ಜಯ ಸಾಧಿಸಿತು. ಕೂತಂಡ ಪರ ಸಂತೋಷ್ ಮೇದಪ್ಪ 1 ಗೋಲು ದಾಖಲಿಸಿದರು. ಪೆಮ್ಮಂಡ ಸುಹಾನ್ ಮಂದಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಅಮ್ಮಣಿಚಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಜಯ ಸಾಧಿಸಿತು. ಅಮ್ಮಣಿಚಂಡ ಪ.ರ ವಿಘ್ನೇಶ್ ಬೋಪಣ್ಣ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ಗ್ಯಾನ್ ಉತ್ತಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ನೆರವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-3 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ದಾಖಲಿಸಿತು. ನೆರವಂಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಸಣ್ಣುವಂಡ ಮತ್ತು ಸೋಮೆಯಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-2 ಗೋಲುಗಳ ಅಂತರದಲ್ಲಿ ಸಣ್ಣುವಂಡ ತಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಪೊನ್ನಣ್ಣ ಹಾಗೂ ಸೋಮೆಯಂಡ ಪರ ಪುನೀತ್ ತಲಾ 1 ಗೋಲು ದಾಖಲಿಸಿದರು. ಸೋಮೆಯಂಡ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಇಟ್ಟಿರ ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-3 ಗೋಲುಗಳ ಅಂತರದಲ್ಲಿ ಕಾಂಡಂಡ ತಂಡ ಜಯ ಸಾಧಿಸಿತು. ಕಾಂಡಂಡ ಪರ ಆದಿತ್ಯ ಅಪ್ಪಣ್ಣ ಹಾಗೂ ಇಟ್ಟಿರ ಪರ ಭವಿನ್ ತಲಾ 1 ಗೋಲು ದಾಖಲಿಸಿದರು. ಭವಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕರವಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 3-2 ಗೋಲುಗಳ ಅಂತರದಲ್ಲಿ ಕರವಂಡ ಗೆಲುವು ದಾಖಲಿಸಿತು.