ಸಾರಾಂಶ
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯ ಪೂರ್ವ ಸಿದ್ಧತೆ ಕುರಿತು ಕೆಪಿಸಿಸಿ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಭೆ ನಗರದ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಿತು.ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಉಪಚುನಾವಣೆಯ ಅಭ್ಯರ್ಥಿ ಎಸ್. ರಾಜು ಪೂಜಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ಬಾವ, ಮಿಥುನ್ ರೈ, ಇನಾಯತ್ ಅಲಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕಾಧ್ಯಕ್ಷ ಮನೋರಾಜ್ ರಾಜೀವ್, ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ವಿಭಾಗದ ಅಧ್ಯಕ್ಷ ಪೂರ್ಣೇಶ್ ಕುಮಾರ್ ಭಂಡಾರಿ ಇದ್ದರು.