ಸಾರಾಂಶ
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024ರ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಗುರುವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭ ಉಡುಪಿ ಬಿಜೆಪಿಯ ಹಿರಿಯರಾದ ವಿಶ್ವನಾಥ ಶೆಟ್ಟಿ, ಮಂಗಳೂರಿನ ಡಾ. ಶಿವಚರಣ್ ಶೆಟ್ಟಿ, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ. ಶಂಕರ್ ಉಪಸ್ಥಿತರಿದ್ದರು.
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.ಇದಕ್ಕೆ ಮೊದಲು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅವರೊಂದಿಗೆ ಜಿ.ಪಂ. ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಸುವರ್ದನ ನಾಯಕ್, ವಾಸುದೇವ ಭಟ್ ಪೆರಂಪಳ್ಳಿ ಮುಂತಾದವರಿದ್ದರು.