ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ರಾಮ್‌ ಜಿ ಮಹಿಳಾ ಮತ್ತು ಕುರಿಕಾರ ವಿರೋಧಿ ಮಸೂದೆಯಾಗಿದೆ. ಕೇಂದ್ರ ಸರ್ಕಾರ ಹಿಂಪಡೆದು ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಬೇಕು. ವರ್ಷದಲ್ಲಿ 200 ದಿನ ಉದ್ಯೋಗ ಮತ್ತು 600 ರು. ಕೂಲಿಗಾಗಿ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ವಿಬಿ ರಾಮ್‌ ಜಿ ಮಸೂದೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳ ತಾಲೂಕು ಕಾರ್ಯಕರ್ತರು ಗುರುವಾರ ವಿಧಾನಸೌಧ ಚಲೋ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುಮಾರು 300ಕ್ಕೂ ಹೆಚ್ಚು ಕಾರ್ಯಕರ್ತರಿದ್ದ ಬಸ್‌ಗಳಿಗೆ ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ ಸದಸ್ಯೆ ಶೋಭಾ ಹಾಗೂ ಜಿಲ್ಲಾ ಅಧ್ಯಕ್ಷೆ ಡಿ.ಕೆ.ಲತಾ ಜಂಟಿ ಚಾಲನೆ ನೀಡಿದರು.

ಈ ಮಾತನಾಡಿದ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ರಾಮ್‌ ಜಿ ಮಹಿಳಾ ಮತ್ತು ಕುರಿಕಾರ ವಿರೋಧಿ ಮಸೂದೆಯಾಗಿದೆ. ಕೇಂದ್ರ ಸರ್ಕಾರ ಹಿಂಪಡೆದು ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಬೇಕು. ವರ್ಷದಲ್ಲಿ 200 ದಿನ ಉದ್ಯೋಗ ಮತ್ತು 600 ರು. ಕೂಲಿಗಾಗಿ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಕೂಲಿ ಕಾರ್ಮಿಕರು ವಿಧಾನಸೌಧ ಚಲೋ ನಂತರ ಫ್ರೀಡಂ ಪಾಕ್‌ನಲ್ಲಿ ಧರಣಿ ನಡೆಸಲಾಗುವುದು ಎಂದರು.

ಮರ್ಯಾದೆ ಗೇಡು ಹತ್ಯೆಗಳ ತಡೆಗಾಗಿ ವಿಶೇಷ ಕಾನೂನು ಜಾರಿ, ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಮತ್ತು ಅಸಹಜ ಸಾವಿನ ಬಗ್ಗೆ ಎಸ್ಐಟಿ ಮೂಲಕ ಸಮಗ್ರ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಧರಣಿ ಸತ್ಯಾಗ್ರಹದಲ್ಲಿ ಹಕೊತ್ತಾಯ ಮಂಡಿಸಲಾಗುವುದು ಎಂದರು.

ಈ ವೇಳೆ ಸಂಘಟನೆಗಳ ಮುಖಂಡರಾದ ರೇಣುಕಾ, ನಿಡಗುಂದಿ ಸಾವಿತ್ರಮ್ಮ, ಮೀನಾಕ್ಷಿ, ಜಯಲಕ್ಷ್ಮಿ, ಪೂರ್ಣಿಮಾ ಮತ್ತಿತರರಿದ್ದರು.

ಐದು ದಿನಗಳ ಕಾಲ ವೈದ್ಯರಿಂದ ಮುಷ್ಕರ

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ, ನೌಕರರ ಬೇಡಿಕೆ ಈಡೇರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು, ಬೇಡಿಕೆಗಳ ಈಡೇರಿಕಾಗಿ ಒತ್ತಾಯಿಸಿ ಇಲಾಖೆ ಎಲ್ಲಾ ವೃಂದ ಸಂಘಗಳ ಸಹಯೋಗದೊಂದಿಗೆ ಮಾ.11 ರಿಂದ 15ರ ಐದು ದಿನಗಳ ಕಾಲ ಮೊದಲ ಹಂತದ ಮುಷ್ಕರ ಮಾಡುವುದಾಗಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘ ತಿಳಿಸಿದೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳು ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೆಂದ್ರ ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.ಎರಡನೇ ಹಂತದಲ್ಲಿ ಮಾ.16 ರಿಂದ ಬೇಡಿಕೆ ಈಡೇರುವವರೆಗೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟ ಕಾಲದ ಮುಷ್ಕರ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. 12 ಬೇಡಿಕೆಗಳನ್ನು ನೌಕರರು ಸರ್ಕಾರದ ಮುಂದಿಟ್ಟು ಪ್ರತಿಭಟನೆ ಎಚ್ಚರಿಕೆ ನೀಡಿದ್ದೇವೆ. ಈ ಬಗ್ಗೆ ಶಾಸಕ ಎಚ್.ಟಿ.ಮಂಜು ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಈ ವೇಳೆ ಸರ್ಕಾರಿ ವೈದ್ಯಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎಸ್.ಸಾಗರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳ ಇದ್ದರು.