ಬೆಳ್ತಂಗಡಿ: ದ.ಕ. ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಷೇತ್ರ. ನಮ್ಮಲ್ಲಿ ಅನೇಕರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದರಲ್ಲೂ ವಿದ್ವತ್ ಶಿಕ್ಷಣ ಸಂಸ್ಥೆ ಸಮಾಜ ಮುಖಿಯಾಗಿ ಚಿಂತಿಸಿ, ಸಮಾಜದ ವಿದ್ಯಾರ್ಥಿಗಳಿಗಾಗಿ 54 ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಿವೆ, ಅದಕ್ಕೆ ಹೇಗೆ ತಯಾರಿ ನಡೆಸಬೇಕೆಂಬ ನೆಲೆಯಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಉಚಿತವಾಗಿ ಮಾರ್ಗದರ್ಶನ ನೀಡಲು ಮುಂದಾಗಿರುವ ಏಕೈಕ ಕಾಲೇಜೆಂದರೆ ಅದು ವಿದ್ವತ್ ಕಾಲೇಜು ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಹೇಳಿದರು.ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸೆ. 8ರಂದು ಕಾಲೇಜಿನ ಆವರಣದಲ್ಲಿ ನಡೆದ ‘ವಾಕ್‌ ಇಂಟು ವಿದ್ವತ್‌ , ಎ ಸ್ಟೆಪ್‌ ಇಂಟು ಸಕ್ಸೆಸ್‌’ ಎಂಬ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಶಿಕ್ಷಣ ಪಡೆದ ಸಂಸ್ಥೆಗೆ ಕೀರ್ತಿ ತನ್ನಿ: ವಾಕ್ ಇನ್ ಟು ವಿದ್ವತ್, ಎ ಸ್ಟೆಪ್ ಇನ್ ಟು ಸಕ್ಸಸ್ ನಾಮಫಲಕ ಅನಾವರಣ ಮಾಡಿದ ಪದ್ಮಶ್ರೀ ಹರೇಕಳ ಹಾಜಬ್ಬ ಅವರು ಮಾತನಾಡಿ, ಬಡತನವಾದುದರಿಂದ ನಾನು ಶಿಕ್ಷಣದಿಂದ ವಂಚಿತನಾದೆ. ಆದರೆ ಅದರಿಂದ ನಾನು ಪಟ್ಟ ಕಷ್ಟ ಬೇರೊಬ್ಬರು ಪಡಬಾರದು ಎಂಬ ನೆಲೆಯಲ್ಲಿ ನನ್ನೂರಲ್ಲಿ ಸರಕಾರಿ ಶಾಲೆ ತೆರೆಯುವ ಕನಸು ಕಂಡೆ. ಈ ಅಭಿಲಾಷೆ ಹೆಮ್ಮರವಾಗಿ ಬೆಳೆಯಿತು. ಅದನ್ನು ಮಾಧ್ಯಮಗಳು ಗುರುತಿಸಿದ್ದರಿಂದ ಈ ಬಡವನಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಬರುವಂತಾಗಿದೆ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ಕೈಮುಗಿದು ನಮಿಸುವುದೇನೆಂದರೆ ಶಿಕ್ಷಣ ಪಡೆದ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ ವಿದ್ವತ್ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿದ್ವತ್ ಕಾಲೇಜು ವಿದ್ವಾರ್ಥಿಗಳ ವಿವೇಚನೆಗಾಗಿ ಉಚಿತ ಶೈಕ್ಷಣಿಕ ಸಮಾಲೋಚನೆ ಹಾಗೂ ವೃತ್ತಿ ಮಾರ್ಗದರ್ಶನ ಪರಿಚಯಿಸಿದ್ದೇವೆ. ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಇದರ ಗಂಭೀರತೆ ಪೋಷಕರಿಗೂ ಅರಿವಿರಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಭೌತಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದ ಬೆಳ್ತಂಗಡಿ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಅವರ ಭವಿಷ್ಯ ರೂಪಿಸುವ ದೂರದೃಷ್ಟಿ ಚಿಂತನೆಗೆ ಕಾಲೇಜನ್ನು ಅಭಿನಂದಿಸುತ್ತೇನೆ ಎಂದರು.ರಸಾಯನಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಇರುವುದು ಕಲಿಯಲು ಅಲ್ಲ, ಹೊರತಾಗಿ ಅವಿಷ್ಕರಿಸಲು. ಅವಿಷ್ಕರಿಸುವವರು ಬೆಳೆಯುತ್ತಾರೆ. ನಿಮ್ಮ ಆಲೋಚನಾ ಲಹರಿಯನ್ನು ವಿಸ್ತರಿಸಿ ಎಂದರು.ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಜೀವಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದರು.

ಸನ್ಮಾನ:ವಿಶೇಷ ಆಹ್ವಾನಿತರಾದ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಉಚಿತ ಶೈಕ್ಷಣಿಕ ಸಮಾಲೋಚನೆಯಲ್ಲಿ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡುವ ಟಿ. ಶರ್ಟ್ ನ್ನು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ವಿದ್ವತ್ ಕಾಲೇಜು ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿಗಳಾದ ಎಂ.ಕೆ. ಕಾಶಿನಾಥ್‌, ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ಚಂದ್ರ ಶೆಟ್ಟಿ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಂಡಗಳಲೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರತಾಪ್ ಬಾಬು ಡಿ.ಎಂ. ಪ್ರಾಸ್ತಾವಿಸಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಹರೀಶ್ ಕೆ.ಆರ್. ವಂದಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳ ಸಂದೇಶ ಪತ್ರವನ್ನು ಪಿಆರ್ ಒ ಚೈತ್ರೇಶ್ ಸಿ. ವಾಚಿಸಿದರು‌.ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್ ಟಾಪ್, ಟ್ಯಾಬ್:ವಿದ್ವತ್ ಪ್ರತಿಭಾನ್ವೇಷಣೆ ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪರೀಕ್ಷೆ’ ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ಟ್ಯಾಬ್ ನ್ನು ವಿಶೇಷ ಬಹುಮಾನವಾಗಿ ನೀಡಲಿದೆ ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಅವರ ಅಂಕ ಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ತಿಳಿಸಿದರು.ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸೆ. 8ರಂದು ಕಾಲೇಜಿನ ಆವರಣದಲ್ಲಿ ನಡೆದ ‘ವಾಕ್‌ ಇಂಟು ವಿದ್ವತ್‌ , ಎ ಸ್ಟೆಪ್‌ ಇಂಟು ಸಕ್ಸೆಸ್‌’ ಎಂಬ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಶಿಕ್ಷಣ ಪಡೆದ ಸಂಸ್ಥೆಗೆ ಕೀರ್ತಿ ತನ್ನಿ: ವಾಕ್ ಇನ್ ಟು ವಿದ್ವತ್, ಎ ಸ್ಟೆಪ್ ಇನ್ ಟು ಸಕ್ಸಸ್ ನಾಮಫಲಕ ಅನಾವರಣ ಮಾಡಿದ ಪದ್ಮಶ್ರೀ ಹರೇಕಳ ಹಾಜಬ್ಬ ಅವರು ಮಾತನಾಡಿ, ಬಡತನವಾದುದರಿಂದ ನಾನು ಶಿಕ್ಷಣದಿಂದ ವಂಚಿತನಾದೆ. ಆದರೆ ಅದರಿಂದ ನಾನು ಪಟ್ಟ ಕಷ್ಟ ಬೇರೊಬ್ಬರು ಪಡಬಾರದು ಎಂಬ ನೆಲೆಯಲ್ಲಿ ನನ್ನೂರಲ್ಲಿ ಸರಕಾರಿ ಶಾಲೆ ತೆರೆಯುವ ಕನಸು ಕಂಡೆ. ಈ ಅಭಿಲಾಷೆ ಹೆಮ್ಮರವಾಗಿ ಬೆಳೆಯಿತು. ಅದನ್ನು ಮಾಧ್ಯಮಗಳು ಗುರುತಿಸಿದ್ದರಿಂದ ಈ ಬಡವನಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಬರುವಂತಾಗಿದೆ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ಕೈಮುಗಿದು ನಮಿಸುವುದೇನೆಂದರೆ ಶಿಕ್ಷಣ ಪಡೆದ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ ವಿದ್ವತ್ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿದ್ವತ್ ಕಾಲೇಜು ವಿದ್ವಾರ್ಥಿಗಳ ವಿವೇಚನೆಗಾಗಿ ಉಚಿತ ಶೈಕ್ಷಣಿಕ ಸಮಾಲೋಚನೆ ಹಾಗೂ ವೃತ್ತಿ ಮಾರ್ಗದರ್ಶನ ಪರಿಚಯಿಸಿದ್ದೇವೆ. ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಇದರ ಗಂಭೀರತೆ ಪೋಷಕರಿಗೂ ಅರಿವಿರಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಭೌತಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದ ಬೆಳ್ತಂಗಡಿ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಅವರ ಭವಿಷ್ಯ ರೂಪಿಸುವ ದೂರದೃಷ್ಟಿ ಚಿಂತನೆಗೆ ಕಾಲೇಜನ್ನು ಅಭಿನಂದಿಸುತ್ತೇನೆ ಎಂದರು.ರಸಾಯನಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಇರುವುದು ಕಲಿಯಲು ಅಲ್ಲ, ಹೊರತಾಗಿ ಅವಿಷ್ಕರಿಸಲು. ಅವಿಷ್ಕರಿಸುವವರು ಬೆಳೆಯುತ್ತಾರೆ. ನಿಮ್ಮ ಆಲೋಚನಾ ಲಹರಿಯನ್ನು ವಿಸ್ತರಿಸಿ ಎಂದರು.ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಜೀವಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದರು.

ಸನ್ಮಾನ:ವಿಶೇಷ ಆಹ್ವಾನಿತರಾದ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಉಚಿತ ಶೈಕ್ಷಣಿಕ ಸಮಾಲೋಚನೆಯಲ್ಲಿ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡುವ ಟಿ. ಶರ್ಟ್ ನ್ನು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ವಿದ್ವತ್ ಕಾಲೇಜು ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿಗಳಾದ ಎಂ.ಕೆ. ಕಾಶಿನಾಥ್‌, ಸುಚಿತ್ರಾ ಶೆಟ್ಟಿ, ರೇಶ್ಮಾ ಸುಭಾಶ್ಚಂದ್ರ ಶೆಟ್ಟಿ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಂಡಗಳಲೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರತಾಪ್ ಬಾಬು ಡಿ.ಎಂ. ಪ್ರಾಸ್ತಾವಿಸಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಹರೀಶ್ ಕೆ.ಆರ್. ವಂದಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳ ಸಂದೇಶ ಪತ್ರವನ್ನು ಪಿಆರ್ ಒ ಚೈತ್ರೇಶ್ ಸಿ. ವಾಚಿಸಿದರು‌.ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್ ಟಾಪ್, ಟ್ಯಾಬ್:ವಿದ್ವತ್ ಪ್ರತಿಭಾನ್ವೇಷಣೆ ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪರೀಕ್ಷೆ’ ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ ಟ್ಯಾಬ್ ನ್ನು ವಿಶೇಷ ಬಹುಮಾನವಾಗಿ ನೀಡಲಿದೆ ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಅವರ ಅಂಕ ಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ತಿಳಿಸಿದರು.