ಯಕ್ಷಗಾನ ಮತ್ತು ಯಕ್ಷಗಾನ ಕಲಾವಿದರಿಗಾಗಿ ದುಡಿಯುತ್ತಿರುವ ಉಡುಪಿ ಯಕ್ಷಗಾನ ಕಲಾರಂಗವು ಬಡ, ಪ್ರತಿಭಾವಂತ ಮಕ್ಕಳಿಗೆ ಸಹಾಯ ಮಾಡುವುದಕ್ಕಾಗಿ ಅರಂಭಿಸಿರುವ ವಿದ್ಯಾಪೋಷಕ್ ಯೋಜನೆಯ 22ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು 27ರಂದು ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಈ ಬಾರಿ 1273 ವಿದ್ಯಾರ್ಥಿಗಳಿಗೆ 1,75,81,500 ರು. ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಡುಪಿ : ಯಕ್ಷಗಾನ ಮತ್ತು ಯಕ್ಷಗಾನ ಕಲಾವಿದರಿಗಾಗಿ ದುಡಿಯುತ್ತಿರುವ ಉಡುಪಿ ಯಕ್ಷಗಾನ ಕಲಾರಂಗವು ಬಡ, ಪ್ರತಿಭಾವಂತ ಮಕ್ಕಳಿಗೆ ಸಹಾಯ ಮಾಡುವುದಕ್ಕಾಗಿ ಅರಂಭಿಸಿರುವ ವಿದ್ಯಾಪೋಷಕ್ ಯೋಜನೆಯ 22ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು 27ರಂದು ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಈ ಬಾರಿ 1273 ವಿದ್ಯಾರ್ಥಿಗಳಿಗೆ 1,75,81,500 ರು. ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಬೆಳಗ್ಗೆ 10 ಗಂಟೆಗೆ ಪರ್ಯಾಯ ಶಿರೂರು ಮಠದ ದಿವಾಣ ಉದಯಕುಮಾರ್ ಸರಳತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಆಶೀರ್ವಚನ ನೀಡಲಿದ್ದಾರೆ. ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದು, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವಾ ಶುಭಾಶಂಸನೆಗೈಯಲಿದ್ದಾರೆ.ಮಧ್ಯಾಹ್ನ 2.30ಕ್ಕೆ ನಡೆಯುವ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ, ಸಂಸ್ಥೆಯ ವಾರ್ಷಿಕ ಸಂಚಿಕೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಡುಗಡೆ ಮಾಡಲಿದ್ದಾರೆ ಎಂದವರು ತಿಳಿಸಿದರು.ಸಂಸ್ಥೆಯ ಉಪಾಧ್ಯಕ್ಷರಾದ ವಿ.ಜಿ. ಶೆಟ್ಟಿ, ಕಿಶನ್ ಹೆಗ್ಡೆ, ನಾರಾಯಣ ಹೆಗಡೆ ಉಪಸ್ಥಿತರಿದ್ದರು.
103 ಮನೆ ಹಸ್ತಾಂತರಿಸಿದೆ: ವಿದ್ಯಾಪೋಷಕ್ ಯೋಜನೆಯಡಿ ಯಕ್ಷಗಾನ ಕಲಾರಂಗವು ಇದುವರೆಗೆ ಯೋಜನೆಯ ಬಡ ಅರ್ಹ ವಿದ್ಯಾರ್ಥಿಗಳಿಗೆ 103 ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, 21 ಮನೆಗಳು ನಿರ್ಮಾಣದ ಹಂತದಲ್ಲಿವೆ, ಇನ್ನೂ 32 ಮನೆಗಳು ನಿರ್ಮಾಣಕ್ಕೆ ಆಯ್ಕೆಯಾಗಿವೆ. ಈ ಬಾರಿ ಯಕ್ಷಗಾನ ಕಲಾವಿದ 74 ಮಕ್ಕಳು ಮತ್ತು ಯೋಜನೆಯ 1199 ಮಕ್ಕಳಿಗೆ ಒಟ್ಟು 1.75 ಕೋಟಿ ರು.ಗೂ ಅಧಿಕ ಮೊತ್ತದ ಸಹಾಯಧನ ವಿತರಿಸಲಾಗುತ್ತಿದೆ. 15 ಮಕ್ಕಳಿಗೆ ಲ್ಯಾಪ್‌ಟಾಪ್ ಮತ್ತು 8 ವಿದ್ಯಾರ್ಥಿಗಳಿಗೆ ವೈದ್ಯಕೀಯ ನೆರವು ಹಾಗೂ ಮಾಹೆಯಿಂದ 1000 ಮಕ್ಕಳಿಗೆ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ.