ಸಂಪನ್ಮೂಲ ವ್ಯಕ್ತಿಯಾದ ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ ಮಾದಕವಸ್ತುಗಳು ಕೇವಲ ವ್ಯಕ್ತಿಯ ದೇಹವನ್ನು ಮಾತ್ರವಲ್ಲದೆ ಅವರ ಮನಸ್ಸು ಕುಟುಂಬ ಭವಿಷ್ಯ ಇವೆಲ್ಲವನ್ನು ಹಾನಿಗೊಳಿಸುತ್ತದೆ ಎಂದರು. ಅವರು ಮಕ್ಕಳಿಗೆ ಪ್ರಮಾಣವಚನ ಬೋಧಿಸಿದರು.

ಕನ್ನಡಪ್ರಭವಾರ್ತೆ ಪುತ್ತೂರು

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ವತಿಯಿಂದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮವು ನಡೆಯಿತು. ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ವಕೀಲ ಅಶ್ವಿನ್ ಎಲ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವಕ ಯುವತಿಯರು ಡ್ರಗ್ಸ್ ಜಾಲದತ್ತ ಆಕರ್ಷಿತರಾಗದೇ ಶಿಕ್ಷಣದ ಜೊತೆ ಹೆಜ್ಜೆ ಹಾಕಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾದ ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ ಮಾದಕವಸ್ತುಗಳು ಕೇವಲ ವ್ಯಕ್ತಿಯ ದೇಹವನ್ನು ಮಾತ್ರವಲ್ಲದೆ ಅವರ ಮನಸ್ಸು ಕುಟುಂಬ ಭವಿಷ್ಯ ಇವೆಲ್ಲವನ್ನು ಹಾನಿಗೊಳಿಸುತ್ತದೆ ಎಂದರು. ಅವರು ಮಕ್ಕಳಿಗೆ ಪ್ರಮಾಣವಚನ ಬೋಧಿಸಿದರು.ಕಾರ್ಯಕ್ರಮದಲ್ಲಿ ಕಡಬ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಕೀಲ ಮಹೇಶ್ ಕೆ ಸವಣೂರು, ಜಿಲ್ಲಾ ನಿದೇರ್ಶಕ ಪದ್ಮನಾಭ ಶೆಟ್ಟಿ, ಪ್ರಾಂಶುಪಾಲೆ ಡಾ. ರಾಜಲಕ್ಷ್ಮಿ ಎಸ್ ರೈ, ಕಡಬ ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಕೃಷಿ ಪತ್ತಿನ ಸಹಕಾರಿ ಸಂಘದ ತಾರಾನಾಥ ಕಾಯರ್ಗ, ಸಮರ್ಥನ ಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ ಸುಲಾಯ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ಹೊನ್ನಪ್ಪ ಗೌಡ ಪರಣೆ, ಗಣೇಶ್ ಅಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಕಲ್ಪನಾ ವಂದಿಸಿದರು. ಪವಿತ್ರಾ ನಿರೂಪಿಸಿದರು.