ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಸುಪ್ರಿಯಾಗೆ ‘ವಿದ್ಯಾರತ್ನ’ ಪ್ರಶಸ್ತಿ

| Published : Oct 23 2024, 12:50 AM IST

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಸುಪ್ರಿಯಾಗೆ ‘ವಿದ್ಯಾರತ್ನ’ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಕಳೆದ 15 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಪಠ್ಯ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಹೊಂದಿದ್ದಾರೆ. ಕಳೆದ 8 ವರ್ಷಗಳಿಂದ ಗೈಡ್ ಕ್ಯಾಪ್ಟನ್ ಆಗಿರುವ ಸುಪ್ರಿಯಾ ಅವರು ಅನೇಕ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿ ರಾಜ್ಯ ಪುರಸ್ಕಾರ ಪಡೆಯುವಂತೆ ಮಾಡಿದ್ದಾರೆ. ರಾಜ್ಯಮಟ್ಟದ ಕವಿ ಕಾವ್ಯ ಕಮ್ಮಟದಲ್ಲಿ ಕವನ ವಾಚನ ಮಾಡಿ ಪುರಸ್ಕೃತರಾಗಿದ್ದಾರೆ.

ಕನ್ನಡ ಸ್ನಾತಕೋತ್ತರ ಪದವೀಧರೆಯಾಗಿರುವ ಇವರು, ಮಂಗಳೂರಿನ ಜೆಪ್ಪು ನಿವಾಸಿಯಾಗಿದ್ದು, ಇವರ ಪತಿ ವಸಂತ ಕುಮಾರ್ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿದ್ದಾರೆ.