ಸಾರಾಂಶ
Protest by Karunada Vijaysena workers
-ಕರುನಾಡ ವಿಜಯಸೇನೆ ಕಾರ್ಯಕರ್ತರಿಂದ ಪ್ರತಿಭಟನೆ । ಪ್ರಧಾನಿ ಮೋದಿಗೆ ಮನವಿ
--ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿ 26ಮಂದಿ ಅಮಾಯಕರು ಬಲಿಯಾಗಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ರವಾನಿಸಲಾಯಿತು.ಕೇಂದ್ರ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯ ತಲೆದಂಡವಾಗಬೇಕು.
2019ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಇದು ಎರಡನೇ ಅತ್ಯಂತ ಭೀಕರ ದಾಳಿಯಾಗಿದೆ. ಹಿಂದೂಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರನ್ನು ಸೆದೆ ಬಡಿಯಬೇಕು. ಆಗ ಬಲಿಯಾದವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ. ದಾಳಿಯಲ್ಲಿ ಬಲಿಯಾದವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಜೊತೆಗೆ ಮೃತರಿಗೆ ತಲಾ ಒಂದು ಕೋಟಿ ರೂ.ಗಳ ಪರಿಹಾರ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾಧ್ಯಕ್ಷೆ ವೀಣಗೌರಣ್ಣ, ಗೋಪಿನಾಥ್, ಕಮಲಮ್ಮ, ಅವಿನಾಶ್, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್ ಮುತ್ತು, ಶಶಿ, ವಿಜಯಬಾಬು, ಪ್ರದೀಪ್, ಹರೀಶ್‍ಕುಮಾರ್, ಅಖಿಲೇಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.---
ಪೋಟೋ:ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದಿರುವ ಉಗ್ರರ ದಾಳಿ ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
------ಫೋಟೋ 23 ಸಿಟಿಡಿ 4